ರಾಮನಗರ:ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದುಬಿದ್ದು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದೆ.
ತಿಪ್ಪಸಂದ್ರ ಹೋಬಳಿಯ ಹೆಬ್ಬೆಳಲು ಗ್ರಾಮದ ನಿವಾಸಿ ಶಿವರಾಜು (55) ಮೃತ ವ್ಯಕ್ತಿ. ಹೃದಯಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ಅಮೆರಿಕ ಹೈಸ್ಕೂಲ್​ನಲ್ಲಿ ವಿದೇಶಿ ಭಾಷೆಯಾಗಿ ಕನ್ನಡ ಕಲಿಕೆ: ಇದು ಕನ್ನಡಿಗರ ಹೆಮ್ಮೆ..!
ಬಿಜೆಪಿಗೆ ನೂತನ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಮಾಗಡಿಯಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಭಾಗಿಯಾಗಿದ್ದರು. ಕಾರ್ಯಕ್ರಮ ಪೂರ್ಣಗೊಳ್ಳುವ ಸಮಯದಲ್ಲಿ ವೇದಿಕೆ ಮೇಲಿಂದಲ್ಲೇ ಕುಸಿದು‌ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮೊದಲೇ ಶಿವರಾಜು‌ ಸಾವಿಗೀಡಾದ್ದಾರೆ.
ಡಿಸಿಎಂ ವೇದಿಕೆ ಇಳಿಯುತ್ತಿದ್ದಂತೆ ಶಿವರಾಜು ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮೃತರು ತಿಪ್ಪಸಂದ್ರ ಹೋಬಳಿ ಮಂಡಲದ ಕಾರ್ಯದರ್ಶಿಯಾಗಿದ್ದರು.(ದಿಗ್ವಿಜಯ ನ್ಯೂಸ್​)
ವಿಜೆ ಚಿತ್ರಾರ ದಿಢೀರ್​ ಸಾವಿನ ಬೆನ್ನಲ್ಲೇ ಪಾಲಕರ ಆರೋಪ: ಪೊಲೀಸರ ಮುಂದೆ ಭಾವಿ ಪತಿಯ ಶಾಕಿಂಗ್​ ಹೇಳಿಕೆ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 1 =
Remember me
