ಹಾಸನ:ಹೊಳೆನರಸೀಪುರ ತಾಲೂಕು ಮಾರಗೊಂಡನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕೊಂದಿರುವ ದುಷ್ಕರ್ಮಿಗಳು, ಶವದ ಬೆನ್ನಿಗೆ ಕಲ್ಲು ಕಟ್ಟಿ ಬಾವಿಗೆ ಎಸೆದಿದ್ದಾರೆ.
ಮಾರಗೊಂಡನಹಳ್ಳಿ ಗ್ರಾಮದ ನಿಂಗಪ್ಪ ಎಂಬುವರ ಪುತ್ರ ಎಂ.ಎನ್. ಮೂರ್ತಿ(50) ಕೊಲೆಯಾದ ದುರ್ದೈವಿ. ಭಾನುವಾರ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರಹೋದ ಮೂರ್ತಿ ವಾಪಸ್​ ಬಂದಿರಲಿಲ್ಲ. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಸೋಮವಾರ ಬೆಳಗ್ಗೆ ಗ್ರಾಮದ ಕೆರೆಯಲ್ಲಿರುವ ಬಾವಿಯಲ್ಲಿ ಮನುಷ್ಯನ ಕಾಲು ಕಾಣಿಸುತ್ತಿತ್ತು. ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಅಲ್ಲಿದ್ದ ಮೃತದೇಹ ಮೂರ್ತಿಯದ್ದಾಗಿತ್ತು.ಇದನ್ನೂ ಓದಿರಿಯಡಿಯೂರಪ್ಪನ ಬಂಡವಾಳ ನನ್ನ ಕೈಯಲ್ಲಿದೆ, ನನ್ನ ತಂಟೆಗೆ ಬಂದರೆ ಹುಷಾರ್​! ಸಿಎಂಗೆ ಎಚ್​ಡಿಕೆ ವಾರ್ನಿಂಗ್​
ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಮೂರ್ತಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಊರಿಗೆ ಬಂದಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಿದ್ದರು. ಫಲಿತಾಂಶ ಹೊರ ಬಂದ ಬಳಿಕ ಪಟಾಕಿ ಹೊಡೆಯುವ ವಿಚಾರವಾಗಿ ಜೆಡಿಎಸ್​-ಬಿಜೆಪಿ ಬೆಂಬಲಿತರ ನಡುವೆ ಗಲಾಟೆ ನಡೆದಿತ್ತು. ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.
ಜೆಡಿಎಸ್​-ಬಿಜೆಪಿ ಬೆಂಬಲಿತರ ಗಲಾಟೆ ಪ್ರಕರಣದಲ್ಲಿ ಮೂರ್ತಿ ಅವರ ಸಹೋದರಿಬ್ಬರು ತಲೆಮರೆಸಿಕೊಂಡಿದ್ದು, ಜಮೀನು ನೋಡಿಕೊಳ್ಳುವ ಸಲುವಾಗಿ ಮೂರ್ತಿ ಊರಿನಲ್ಲೇ ಉಳಿದುಕೊಂಡಿದ್ದರು. ಇದೀಗ ದುರ್ಮರಣಕ್ಕೀಡಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ರಾಜಕೀಯ ದ್ವೇಷಕ್ಕೆ ದುಷ್ಕರ್ಮಿಗಳು ಮೂರ್ತಿಯನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮಾರಗೊಂಡನಹಳ್ಳಿ ಗ್ರಾಮ ಪಡುಲಹಿಪ್ಪೆ ಗ್ರಾಪಂ ಪಂಚಾಯಿತಿಗೆ ಸೇರಿದೆ.
ಸೆಕ್ಸ್​ಗಾಗಿ ಮಾರಾಮಾರಿ! ಮಚ್ಚುಬೀಸಿದ ಪರಸ್ತ್ರೀ, ಆತನ ಕುಟುಂಬಸ್ಥರು ಆಕೆಯ ಕಾಲನ್ನೆ ಕತ್ತರಿಸಿದರು…

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
