ಶಿವಮೊಗ್ಗ:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್, ಸಚಿವ ಸುನೀಲ್​ ಕುಮಾರ್ ಎದುರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅಂಥದ್ದೇ ಒಂದು ಪರಿಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವು ವಿವಾದ ಮುಂದುವರಿದಿದ್ದು ಇಂದು ಬೆಳಗ್ಗೆ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯ ನೆಹರು ನಗರದ ಸುನೀಲ್ (28) ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತ ಈ ಹಲ್ಲೆ ಮಾಡಿದ್ದು, ಸುನೀಲ್ ಗಾಯಗೊಂಡಿದ್ದ. ಈ ಸಂಬಂಧ ಭದ್ರಾವತಿ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ ಬಳಿಕ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಕೆ.ಎಸ್. ಈಶ್ವರಪ್ಪ ಮಾರ್ಗಮಧ್ಯೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುನೀಲ್ ಕುಮಾರ್ ಆರೋಗ್ಯ ವಿಚಾರಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಆಸ್ಪತ್ರೆ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯೆ ‘ನಾವು ಓಟು ಹಾಕಿದ್ದೇವೆ, ನಮ್ಮ ರಕ್ಷಣೆ ನೀವು ಮಾಡುವುದಿಲ್ಲ’ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಸಿಡಿಮಿಡಿಗೊಂಡ ಈಶ್ವರಪ್ಪ, ನಿನಗಿಂತ ನನಗೆ ನೋವು ಜಾಸ್ತಿ ನೋವು ಇದೆ. ಮಗನನ್ನೇ ಕಳೆದುಕೊಂಡಷ್ಟು ನೋವು ಇದೆ. ನಾವು ಏನು ಮಾಡಬೇಕು ಮಾಡುತ್ತ ಬಂದಿದ್ದೇವೆ ಎಂದು ಹೇಳಿದರು. ಬಳಿಕ ಒಂದಷ್ಟು ವಾಗ್ವಾದ ನಡೆದು ಪರಿಸ್ಥಿತಿ ತಿಳಿಯಾಯಿತು.
ಖಾಸಗಿ ಶಾಲೆಯವರು ಬೆಚ್ಚಿಬೀಳುವಂಥ ಆಶ್ವಾಸನೆ ಕೊಟ್ಟ ಕೇಜ್ರಿವಾಲ್​: ಎಲ್ಲಿ, ಏನು?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + three =
Remember me
