ಬಳ್ಳಾರಿ:ಮತಗಟ್ಟೆಗಳ ಬಳಿ ಅದೆಷ್ಟೇ ಬಂದೋಬಸ್ತ್ ನಡೆಸಿದರೂ ಎಲ್ಲಾದರೂ ಒಂದು ಕಡೆ ವೈಯಕ್ತಿಕ ಕಾರಣಕ್ಕೋ, ಕ್ಷುಲ್ಲಕ ಕಾರಣಕ್ಕೋ ಜಗಳಗಳು ನಡೆಯುತ್ತವೆ. ಇವನ್ನು ತಕ್ಷಣವೇ ಹತೋಟಿಗೂ ಪೊಲೀಸರು ತರುತ್ತಾರೆ. ಇಂತಹದೇ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಜೀವರಾಯನಕೋಟೆ ಗ್ರಾಮದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ತಕರ್ತರ ನಡುವೆ ಮಾರಾಮಾರಿ ನಡೆದಿದ್ದು ಇದರಿಂದಾಗಿ ಕಾಂಗ್ರೆಸ್ ಸ್ಥಳೀಯ ಮುಖಂಡ ಉಮೇಶ್ ಗೌಡ ತಲೆಗೆ ಗಾಯವಾಗಿದೆ.
ಇತ್ತಿಚೆಗೆ ಉಮೇಶ್ ಗೌಡ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಮತದಾನಕ್ಕೆ ತೆರಳುವ ವೇಳೆ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಈ ವೇಳೆ ಉಮೇಶ್ ಗೌಡ ಅವರಿಗೆ ತಲೆಗೆ ಕಲ್ಲೇಟು ಬಿದ್ದಿದ್ದು ತಲೆಗೆ ಗಾಯವಾಗಿದ್ದು ರಕ್ತ ಸುರಿದಿದೆ. ತಕ್ಷಣವೇ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೋಲಿಸರು ದೌಡಾಯಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 17 =
Remember me
