ಬೆಂಗಳೂರು:ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪಕ್ಷ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಲೆನಾಡು ಕರ್ನಾಟಕವನ್ನು ಕೇಂದ್ರವಾಗಿರಿಸಿಕೊಂಡು ಅಡಿಕೆ ಬೆಳಗಾರರಿಗೆ ಭರವಸೆಯೊಂದನ್ನು ನೀಡಿದೆ. ಕಾಫಿ ಮಂಡಳಿ ಮಾದರಿಯಲ್ಲಿ ಸಂಶೋಧನಾ ಸಂಸ್ಥೆ ಸೇರಿದಂತೆ ರಾಜ್ಯ ಅಡಿಕೆ ಮಂಡಳಿ ಸ್ಥಾಪಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ.
ಇದಲ್ಲದೆ ‘ಮಿಷನ್ ಕನೆಕ್ಟ್ ಕರ್ನಾಟಕದ’ ಅಡಿಯಲ್ಲಿ ಪ್ರಾದೇಶಿಕ ವಾಯುಯಾನ ಸಂಪರ್ಕ ಕಲ್ಪಿಸಲು ಉಡಾನ್ ಯೋಜನೆಯಡಿ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪಿಸಲು ಬಿಜೆಪಿ ಚಿಂತನೆ ನಡೆಸಿದ್ದು, ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು
ಶಿವಮೊಗ್ಗದಲ್ಲಿ ಆಯುರ್ವೇದ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಸ್ಥಾಪಿಸುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
