ಬೆಂಗಳೂರು:ಎಚ್.ಡಿ ಕುಮಾರಸ್ವಾಮಿಯನ್ನು ಯಾವುದೇ ಕಾರಣಕ್ಕೂ ನಂಬಬೇಡಿ ಎಂದು ಒಕ್ಕಲಿಗ ಸಮುದಾಯದವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ಕುಮಾರಸ್ವಾಮಿ ಬಾಯಲ್ಲಿ ಬರುವುದು ಶೇ.99ರಷ್ಟು ಸುಳ್ಳು. ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಪಿತೂರಿ ಮಾಡಿದ್ದಾರೆ. ಒಕ್ಕಲಿಗರ ನಾಯಕರನ್ನು ಸಹಿಸಲು ಆಗುತ್ತಿಲ್ಲ. ಒಕ್ಕಲಿಗರು ಯಾರಿಗೆ ಪಾಠ ಕಲಿಸುತ್ತೀರ ನೀವೇ ನಿರ್ಧರಿಸಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕರೆಕೊಟ್ಟರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಅವರು ಮುಠ್ಠಾಳರಲ್ಲ. ಈಗಾಗಲೇ ಅವರು ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದ್ದು, ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ ಎಂದರು.ಬಿಜೆಪಿಯವರು ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಆಧಾರದ ಮೇಲೆ ಮುಂದೆ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ ಎಂದು ಲೇವಡಿ ಮಾಡಿದರು.ಐಟಿ ಇಲಾಖೆ ಹೇಳಿಕೆಯಲ್ಲಿ ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಹಣವನ್ನು ವೈಟ್ ಮಾತ್ರವಲ್ಲದೇ, ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಅವರಿಗೆ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
