ಬೆಂಗಳೂರು:ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಜತೆ ಸದಾ ಇರುತ್ತೇನೆ. ಕಳೆದ ಚುನಾವಣೆಯಲ್ಲಿ ಬೆಂಬಲಿಸಿ ಹೆಚ್ಚಿನ ಮತದೊಂದಿಗೆ ಗೆಲ್ಲಿಸಿದ್ದೀರಿ. ಈ ಬಾರಿಯೂ ಹೆಚ್ಚಿನ ಮತದೊಂದಿಗೆ ಮತ ನೀಡಿ ಎಂದು ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಮನವಿ ಮಾಡಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದಲ್ಲಿ ಸವಿತಾ ಸಮಾಜದವರೊಡನೆ ಸಮಾಲೋಚನೆ ನಡೆಸಿ ಮಾತನಾಡಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಯಾವಾಗಲೂ ನಾನು ಸ್ಪಂದಿಸುತ್ತೇನೆ. ಅತ್ಯುತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅವರಿಗೆ ಉಚಿತಶಿಕ್ಷಣ ಕೊಡುವಂತಹ ಕೆಲಸವನ್ನು ಮಾಡುತ್ತೇವೆ ಎಂದರು.
ಇದನ್ನೂ ಓದಿ:ಪ್ರಚಾರ ಕಣದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಅಬ್ಬರ: ಇಂದು 3 ಪ್ರಚಾರಸಭೆ, ರಾಜಧಾನಿಯಲ್ಲಿ ರೋಡ್ ಶೋ
ಕ್ಷೇತ್ರದ ಜನರಿಗೆ ಅನುಕೂಲತೆ ಕಲ್ಪಿಸುವ ಮೂಲ ಉದ್ದೇಶದಿಂದ ಮಹಾಲಕ್ಷ್ಮೀ ಲೇಔಟ್​ನಲ್ಲಿ ‘ನಮ್ಮ ಕ್ಲಿನಿಕ್’ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಲು ಮುಂದಾಗಿ ಎಂದರು. ಕ್ಷೇತ್ರದ ಜನತೆಯ ಕುಂದುಕೊರತೆಗಳನ್ನು ಬಗೆಹರಿಸá-ತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡುತ್ತ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು.
ಮಾಜಿ ಉಪಮೇಯರ್ ಎಸ್. ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರಕುಮಾರ್, ಶಿವಾನಂದಮೂರ್ತಿ, ಸಿಮೆಂಟ್ ಶ್ರೀನಿವಾಸ್, ಧನರಾಜ್, ಜಯರಾಮ್ ಪುಟ್ಟಸ್ವಾಮಿ, ಸ್ಥಳೀಯ ಬಿಜೆಪಿ ಮುಖಂಡರಿದ್ದರು.
ನಾನು-ಪತಿ ಡಬಲ್ ಇಂಜಿನ್​ನಂತೆ ಸೇವೆ ಸಲ್ಲಿಸುತ್ತೇವೆ: ಮಂಜುಳಾ ಅರವಿಂದ ಲಿಂಬಾವಳಿ ಭರ್ಜರಿ ಪ್ರಚಾರ

ಸಪ್ತಗಿರಿಗೌಡ ಪರವಾಗಿ ಅಣ್ಣಾಮಲೈ ರೋಡ್ ಶೋ: ಗಾಂಧಿನಗರದಲ್ಲಿ ಮತಯಾಚನೆ

ಗೆಲುವಿಗೆ ದಾರಿಯಾಗಲಿದೆ ಜೆಡಿಎಸ್ ಪ್ರಣಾಳಿಕೆ: ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಅಭಿಮತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + sixteen =
Remember me
