ಬೆಂಗಳೂರು: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಚಾರದ ರ್‍ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು ಈ ದುರ್ಘಟನೆ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಮಾಡಿದ ಒಂದು ಸಣ್ಣ ಎಡವಟ್ಟಿನಿಂದ ಒಂದು ಜೀವ ಹೋಗಿದೆ.  ಮೃತ ವ್ಯಕ್ತಿಯನ್ನು ಪ್ರಕಾಶ್(55) ಎಂದು ಗುರುತಿಸಲಾಗಿದೆ. ಈತ ಕೆ.ಆರ್.ಪುರದ ಟಿ.ಸಿ.ಪಾಳ್ಯದ ನಿವಾಸಿಯಾಗಿದ್ದಾನೆ.
ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ಗೆ ಗುದ್ದಿದೆ. ಈ ವೇಳೆ ಗಂಭೀರ ಗಾಯಗೊಂಡ ಪ್ರಕಾಶ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್‌ ಮೃತಪಟ್ಟಿದ್ದಾರೆ.
ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆ.ಆರ್. ಪುರಂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಷ್ಟೇ ಬ್ಯುಸಿ ಇದ್ದರೂ ನಾನು 1 ಗಂಟೆಯಾದ್ರೂ..ಹೀಗೆ ಮಾಡ್ಲೆಬೇಕು ಎಂದ್ರು ಮಿಲ್ಕಿ ಬ್ಯೂಟಿ ತಮನ್ನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
