ಬೆಂಗಳೂರು:ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವೇರಿದ್ದು, ಬಿಜೆಪಿ ಎರಡನೇ ಪಟ್ಟಿಗಾಗಿ ಕಾತರದಿಂದ ಎದುರುನೋಡುತ್ತಿದೆ. ಇಂದು ನವದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ, ಸಿಇಸಿ ಸಭೆ ರದ್ದಾಗಿದ್ದು, ಸೋಮವಾರ (ಮಾ. 11) ಸಂಜೆ 5 ಗಂಟೆಗೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಬಿಜೆಪಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ:ಭಾನುವಾರವೂ ಜನರಿಲ್ಲದೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಖಾಲಿ ಖಾಲಿ…!
ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಿಇಸಿ ಸಭೆಗೆ ಈಗ ಸಮಯ ನಿಗದಿಯಾಗಿದ್ದು, ಸೋಮವಾರ ಸಂಜೆ ಐದು ಗಂಟೆಗೆ ನಡೆಯಲಿದೆ ಎಂದು ಹೇಳಲಾಗಿದೆ. ಈ ವೇಳೆ ಎರಡನೇ ಪಟ್ಟಿ ಕುರಿತು ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಲಿದ್ದಾರೆ.
ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್​. ಅಶೋಕ್, ಅರವಿಂದ್ ಬೆಲ್ಲದ್, ಪ್ರಲ್ಹಾದ ಜೋಷಿ, ಬಿ.ವೈ. ವಿಜಯೇಂದ್ರ, ರಾಜೇಶ್ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಮಾರ್ಚ್​​ 02ರಂದು ಲೋಕಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿತ್ತು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು. ಈ ಪಟ್ಟಿಯಲ್ಲಿ ಕರ್ನಾಟಕದಿಂದ ಯಾವುದೇ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಘೋಷಿಸರಲಿಲ್ಲ. ಆದರೆ ಈಗ ಎರಡನೇ ಪಟ್ಟಿಯಲ್ಲಿ ಇದನ್ನು ನಿರೀಕ್ಷಿಸಬಹುದು ಎಂಬ ಲೆಕ್ಕಾಚಾರಗಳಿವೆ.
ಹರಾಜಿನಲ್ಲಿ ಒಂದೇ ಒಂದು ನಿಂಬೆ ಹಣ್ಣಿಗೆ 35,000 ರೂ.! ಖರೀದಿ ಮಾಡಿದ ವ್ಯಕ್ತಿಯ ಖುಷಿ ಹೇಳತೀರದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + fifteen =
Remember me
