ಬೆಂಗಳೂರು:ಮತಾಂತರ ಕಾಯ್ದೆ ನಿಷೇಧ ಕಾಯ್ದೆ ವಾಪಸ್ಸು, ಪಠ್ಯಪುಸ್ತಕ ಪರಿಷ್ಕರಣೆಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಸಿಡಿದೆಳಲಿದ್ದು ರಾತ್ರಿ ಬಿಜೆಪಿ ಕೋರ್ ಕಮಿಟಿ ಹಾಗು ಪ್ರಮುಖರ ಸಭೆ ನಡೆದಿದೆ.
ವರ್ಚುವಲ್ ಸೌಲಭ್ಯಗಳ ಮೂಲಕ ಸಭೆ ನಡೆಸಿದ ಬಿಜೆಪಿ ನಾಯಕರು ಕೋರ್‌ಕಮಿಟಿ ಸದಸ್ಯರು ಸೇರಿದಂತೆ ಪ್ರಮುಖ 40 ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ರಾಜ್ಯ ಸರ್ಕಾರ ಕ್ಯಾಬಿನೆಟ್‍ನಲ್ಲಿ ತೆಗೆದುಕೊಂಡ ನಿರ್ಣಯದ ವಿರುದ್ಧ ಚರ್ಚೆ ನಡೆದಿದ್ದು ಮತಾಂತರ ಕಾಯ್ದೆ, ಎಪಿಎಂಸಿ, ಪಠ್ಯಪುಸ್ತಕ ಹಾಗೂ ವಿದ್ಯುತ್ ದರ ಬಗ್ಗೆ ಹೋರಾಟದ ರೂಪುರೇಶೆಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರಣಾಳಿಕೆ ಜಾರಿಪರ್ವ ಶುರು: ಮತಾಂತರ ನಿಷೇಧ, ಎಪಿಎಂಸಿ ಕಾಯ್ದೆ ರದ್ದು, ಸಾವರ್ಕರ್, ಹೆಡ್ಗೆವಾರ್ ಪಠ್ಯಕ್ಕೆ ಕೊಕ್
ಸುಮಾರು 2ಗಂಟೆಗಳ ಕಾಲ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಸದನದ ಒಳಗೂ ಹೊರಗೂ ಈ ಬಗ್ಗೆ ಹೋರಾಟಕ್ಕೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು ಸರ್ಕಾರದ ನಿರ್ಧಾರಗಳನ್ನೇ ರಾಜಕೀಯ ಅಸ್ತ್ರವನ್ನಾಗಿ ತೆಗೆದುಕೊಳ್ಳಲು ಬಿಜೆಪಿ ಮುಂದಾಗಿರುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ:ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್
ಮತಾಂತರ ನಿಷೇಧ ಹಾಗು ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲಾನ್ ರೂಪಿಸಲಾಗಿದೆ ಎನ್ನಲಾಗಿದ್ದು ಇದರ ವಿರುದ್ಧ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + twenty =
Remember me
