ಕಲಬುರ್ಗಿ:ರಾಜ್ಯದಲ್ಲಿ‌ ಕಾಂಗ್ರೆಸ್​ ಸರ್ಕಾರ ಬಂದು‌ ಇಂದಿಗೆ ಒಂದು ವರ್ಷ ಕಳೆದಿದೆ. ಒಂದು ಅರ್ಥದಲ್ಲಿ ಹೇಳುವುದಾದರೆ, ರಾಜ್ಯ ಸರ್ಕಾರದ ಹನಿಮೂನ್‌ ಪೆರೆಡ್ ಅಂತ್ಯಗೊಂಡಿದೆ. ಆದರೆ, ಅಭಿವೃದ್ಧಿ ಕೆಲಸ ಮಾತ್ರ ಶೂನ್ಯ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಟೋಲ್​ ಗೇಟ್​ ಸಿಬ್ಬಂದಿ ಮೇಲೆ ದರ್ಪ ತೋರಿದ ಸರ್ಕಾರಿ ಅಧಿಕಾರಿ
“ಯಾವ ಸಚಿವ ಶಾಸಕರು ಸಹ ಗುದ್ದಲಿ ಪೂಜೆ ಮಾಡಲಿಲ್ಲ, ಹೊಸ ಅಭಿವೃದ್ಧಿ ಕೆಲಸ‌ವೂ ಮಾಡಲಿಲ್ಲ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದ್ರು ರೈತರಿಗೆ ಹಣ ನೀಡುತ್ತಿಲ್ಲ. ಟೆಕ್ನಿಕಲ್ ಕಾರಣ ಹೇಳಿ ಎಲ್ಲಾ ರೈತರಿಗೆ ಪರಿಹಾರ ನೀಡಿಲ್ಲ. ರೈತರಿಗೆ ಈ ಸರ್ಕಾರ ಪರಿಹಾರ ಹಾಗು ಬೆಳೆ ವಿಮೆ ಹಣ ಸಹ ಕೊಡುತ್ತಿಲ್ಲ. ರಾಜ್ಯದಲ್ಲಿ ನಾಲ್ಕು ದಿನಗಳಿಂದ ವಿಧಾನ ಪರಿಷತ್ ಚುನಾವಣೆ ಸಂಬಂಧದಲ್ಲಿ ಪ್ರಚಾರ ಮಾಡಿದ್ದೇನೆ. ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ಈ ಹಿಂದೆ ಎಂಎಲ್​ಸಿ ಆಗಿ ಉತ್ತಮ ಕೆಲಸ ಮಾಡಿದ್ದಾರೆ” ಎಂದರು.
“ನಮ್ಮ ಅಭ್ಯರ್ಥಿ ಗೆಲ್ಲುವ ವಾತಾವರಣ ಪೂರಕವಾಗಿದೆ. ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ದೇಶದಲ್ಲಿ ಚರ್ಚೆಯಾಗುತ್ತಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡೋ ಪರಿಸ್ಥಿತಿ ಬಂದಿದೆ. ಚನ್ನಗಿರಿಯಲ್ಲಿ ನಡೆದ ಘಟನೆ ಮಟ್ಕಾಗೆ ಸಂಬಂಧಪಟ್ಟಿದ್ದು, ಅರೆಸ್ಟ್ ಆದ ವ್ಯಕ್ತಿ ಮೃತನಾಗಿದ್ದಾನೆ. ಸಾವಿರಾರು ಜನ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಇದೆಲ್ಲ ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿಗೆ ಬಂದು ತಲುಪಿದೆ ಎಂಬುದನ್ನು ಒಮ್ಮೆ ನೋಡಿ. ಈ ರಾಜ್ಯದಲ್ಲಿ ಗೃಹ ಸಚಿವರು ಇದ್ದಾರೆ ಅನ್ನೋದೇ ಅನುಮಾನ” ಎಂದು ಹೇಳಿದ್ದಾರೆ.
ನೀವೆಂದಿಗೂ ಈ ತಪ್ಪು ಮಾಡೋದಿಲ್ಲ ಅಂದುಕೊಂಡಿದ್ದೀನಿ; ‘ಕ್ಯಾಪ್ಟನ್ ಕೂಲ್’​ಗೆ ಬಹುಮುಖ್ಯ​ ಸಲಹೆ ಕೊಟ್ಟ ಸುನಿಲ್ ಗವಾಸ್ಕರ್!

ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
