ಬೆಂಗಳೂರು:ನಿನ್ನೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿ ಡಾ. ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇತ್ತೀಚೆಗೆ ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದಿದ್ದರು. ಇದೀಗ ಈ ಹೇಳಿಕೆಗೆ ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಪ್ರತ್ಯುತ್ತರ ನೀಡಿದೆ.
ಇದನ್ನೂ ಓದಿ:ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು?: ಗೃಹ ಸಚಿವ ಡಾ.ಜಿ.ಪರಮೇಶ್ವರ್​
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಹಿಂದೆ ಟ್ವಿಟರ್) ಬಿಜೆಪಿ ಪ್ರತಿಕ್ರಿಯೆನ್ನು ಪೋಸ್ಟ್ ಮಾಡಿದ್ದು “ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ ಪರಮೇಶ್ವರ್ ಅವರ ಸ್ಮೃತಿ I.N.D.I.A ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ. ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಇದೊಂದು ಸಹಸ್ರಾರು ವರ್ಷಗಳಿಂದ ನಡೆದು ಬಂದ, ಬಹು ಉಪಾಸನಾ ವಿಧದ ಜೀವನ ಪದ್ಧತಿ. ಈ ಕಾರಣಕ್ಕೇ ಇದು ಸನಾತನ ಧರ್ಮ ಮತ್ತು ಭಾರತ ಸನಾತನ ಭೂಮಿ.
ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ@DrParameshwaraಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ.ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ…pic.twitter.com/yCWrvb5gsP— BJP Karnataka (@BJP4Karnataka)September 6, 2023
ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ@DrParameshwaraಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ.ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ…pic.twitter.com/yCWrvb5gsP
ಇದನ್ನೂ ಓದಿ:ಪರಮೇಶ್ವರ್ ಭೇಟಿಗೆ ಸುಧಾಮ್ ಜತೆ ಓಡಾಡಿದ ಡಿಕೆಶಿ!
ಔರಂಗಜೇಬನಿಂದ ಹಿಡಿದು ಉದಯನಿಧಿ ಸ್ಟಾಲಿನ್‌ವರೆಗೆ ಅವೆಷ್ಟೋ ದಾಳಿಕೋರರನ್ನು ಈ ಮಣ್ಣು ಕಂಡ ಮೇಲೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಧರ್ಮ ಜಿಜ್ಞಾಸೆಗಿಂತಲೂ ಹೆಚ್ಚು ಸದ್ಯಕ್ಕೆ ನಿಮ್ಮ ಪಕ್ಷದಲ್ಲೇ ನಿಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನ ಕೊಡುವುದು ನಿಮ್ಮ ವೈಯಕ್ತಿಕ ಹಿತದ ದೃಷ್ಟಿಯಿಂದ ಒಳಿತು‌” ಎಂದು ಕೌಂಟರ್ ನೀಡಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − 2 =
Remember me
