ಬೆಂಗಳೂರು:ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳ ಮಾಡುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ. ದಲಿತ ಸಮುದಾಯ ಬಿಜೆಪಿ ಜತೆಗೆ ಮುನ್ನಡೆಯುತ್ತಿರುವುದು ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ದಲಿತ ಸಮುದಾಯದ ದಾರಿ ತಪ್ಪಿಸಿ ತಮ್ಮ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು ಎಂದು ರಾಜ್ಯ ಬಿಜೆಪಿ ತಿಳಿಸಿದೆ.
ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದರುವ ಬಿಜೆಪಿ, ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ ಮನ್ನಿಸದೆ ಕಾಲಹರಣ ಮಾಡಿತ್ತು. ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿರುವುದು ಸಿದ್ದರಾಮಯ್ಯ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ ಕಾಂಗ್ರೆಸ್ ಪಕ್ಷ ಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಾ ಬಂದಿದೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಕಂದಕ ಸೃಷ್ಟಿಯಾಗಿದೆ. ಸಿಎಲ್‌ಪಿ ನಾಯಕರಿಗೂ ಹೇಳದೆ ಟಿಕೆಟ್ ಫೈನಲ್ ಮಾಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಅಬ್ಬರಿಸಿದ್ದರು. ಸಿದ್ದರಾಮಯ್ಯನವರಿಗೆ ಒಮ್ಮೆ ಅವಕಾಶ ನೀಡಿ, ಅವರ ನೇತೃತ್ವದಲ್ಲಿ ಚುನಾವಣೆ ಸೋತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದು ಮರೆತು ಹೋಯಿತೇ ಎಂದು ಸಿದ್ದರಾಮಯ್ಯ ಅವರನ್ನು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
ಪಕ್ಷದ ಹಿರಿಯರಾದ ಬಿ.ಎಸ್​.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರಚಾರ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಬೆದರಿದೆ ಎಂದು ಸರಣಿ ಟ್ವೀಟ್ ಮಾಡಿದೆ.
ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ@siddaramaiahಅವರಿಗೆ ಈಗ@BSBommaiಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ.ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ@INCKarnatakaಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು.ಏಕೆ ಈ ದಲಿತ ವಿರೋಧಿ ಮನೋಸ್ಥಿತಿ?#ಬುರುಡೆರಾಮಯ್ಯ— BJP Karnataka (@BJP4Karnataka)October 14, 2022
ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ@siddaramaiahಅವರಿಗೆ ಈಗ@BSBommaiಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ.ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ@INCKarnatakaಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು.ಏಕೆ ಈ ದಲಿತ ವಿರೋಧಿ ಮನೋಸ್ಥಿತಿ?#ಬುರುಡೆರಾಮಯ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
