ಬೆಂಗಳೂರು:ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಭೀಕರ ಹತ್ಯೆಯ ಪ್ರಕರಣದ ವಿರುದ್ಧ ಶೀಘ್ರ ತನಿಖೆ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.
ಇದನ್ನೂ ಓದಿ:ಭಾವಸಾರ ಕ್ಷತ್ರೀಯ ನಿಗಮ ಮಂಡಳಿ ಸ್ಥಾಪನೆಗೆ ಕ್ರಮ; ರುದ್ರಪ್ಪ ಲಮಾಣಿ ಹೇಳಿಕೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಜು.6 ರಂದು ನಾಪತ್ತೆಯಾಗಿದ್ದು, ಬಳಿಕ ಅವರನ್ನು ಭೀಕರವಾಗಿ ಕೊಲೆ ಮಾಡಿ, 400 ಅಡಿ ಆಳದ ಕೊಳವೆಬಾವಿಗೆ ಎಸೆದಿದ್ದಾರೆ. ಬಾವಿಯಲ್ಲಿ ಅವರ ಶವದ 9 ತುಂಡುಗಳನ್ನು ಪತ್ತೆ ಮಾಡಲಾಗಿದೆ.
ಸದ್ಯ ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಈ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ರಾಜ್ಯ ಬಿಜೆಪಿ ಒತ್ತಾಯಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಅಪರಾಧಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದ ಮಠಾಧೀಶರು ಹಾಗೂ ಸಂತರಿಗೆ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಅಪ್ಪ-ಅಮ್ಮ ಸ್ಥಳದಲ್ಲೇ ಸಾವು; ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರು!
ಈ ಬಗ್ಗೆ ಬಿಜೆಪಿ ವಕ್ತಾರ, ಎಂಎಲ್‌ಸಿ ಎನ್‌. ರವಿಕುಮಾರ್‌ ಮತನಾಡಿದ್ದು, ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಪೈಪ್​​ನಿಂದ ಹಲ್ಲೆ; ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:18 + 16 =
Remember me
