ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಈ ಬಾರಿ ನಿರೀಕ್ಷಿತ ಸೀಟುಗಳು ಬರಲಿಲ್ಲ. ಆದರೆ ಜನರ ಆಶೀರ್ವಾದದಿಂದ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ ಎಂದು ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳು, ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಕ್ಷೇತ್ರದ ಶಾಸಕರ ಭವನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬೆಂಗಳೂರು ಉತ್ತರಲೋಕಸಭಾ ಕ್ಷೇತ್ರದ ಚುನಾವಣೆಯನ್ನು 32 ದಿನಗಳಲ್ಲಿ ನಡೆಸಿದ್ದೇವೆ. ಪಕ್ಷದ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು, ಜೆಡಿಎಸ್‌ನವರ ಸಹಕಾರ, ಪರಿಶ್ರಮ ಹಾಗೂ ಜನರ ಆಶೀರ್ವಾದದಿಂದ ದೊಡ್ಡ ಮತಗಳ ಅಂತರದ ಗೆಲುವು ಸಾಧ್ಯವಾಯಿತು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಕಾರಣಾಂತರಗಳಿಂದ ಬಿಬಿಎಂಪಿ ಚುನಾವಣೆ ವಿಳಂಬವಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲರೂ ಒಂದಾಗಿ ಶ್ರಮಿಸಬೇಕಾಗಿದ್ದು, ನಿಮ್ಮೊಂದಿಗೆ ನಾನಿರುವೆ. ಅದಕ್ಕೂ ಮುನ್ನ ಪ್ರತಿಯೊಂದು ವಾರ್ಡ್‌ನ ಮತದಾರರ ಯಾದಿ ಮೇಲೆ ನಿಗಾವಹಿಸಬೇಕು. ವಾರ್ಡ್‌ವಾರು ಅಸಲಿ ಜತೆಗೆ ಕಾಂಗ್ರೆಸ್‌ನವರು ನಕಲಿ ಮತದಾರರನ್ನು ಸೃಷ್ಟಿಸಿರುವ ಶಂಕೆಯಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಮಾತನಾಡಿ ನಾಡಪ್ರಭು ಕೆಂಪೇಗೌಡರ ಆಶಯದಂತೆ ಬೆಂಗಳೂರು ಒಂದಾಗಿರಬೇಕು. ಮಹಾನಗರ ವಿಭಜಿಸುವ ಕಾಂಗ್ರೆಸ್‌ನ ಪ್ರಯತ್ನವನ್ನು ವಿರೋಧಿಸುತ್ತೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅಭಿವೃದ್ಧಿಗೆ ನಯಾ ಪೈಸೆ ಕೊಟ್ಟಿಲ್ಲ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲೆ ಭಾರ ಹಾಕಿದ್ದಾರೆ. ಅಭಿವೃದ್ಧಿ ಆದ್ಯತೆ ನೀಡಲು ಈ ನಿರ್ಧಾರವೆಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ ಎಂದು ಕೆ.ಗೋಪಾಲಯ್ಯ ಟೀಕಿಸಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಬಿಜೆಪಿ ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಮಾಜಿ ಶಾಸಕ ನರೇಂದ್ರಬಾಬು, ಮುಖಂಡರಾದ ರಾಘವೇಂದ್ರಶೆಟ್ಟಿ, ಕೆ.ವಿ.ರಾಜೇಂದ್ರಕುಮಾರ್, ಎಂ.ಮಹದೇವ, ಜೆಡಿಎಸ್‌ನ ಚಂದ್ರೇಗೌಡ, ಬದ್ರೇಗೌಡ, ನಾರಾಯಣಸ್ವಾಮಿ ಇನ್ನಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
