
ಬೆಂಗಳೂರು:ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಮಾಡುವ ಸಂಬಂಧ 60 ಜನರ ತಂಡವನ್ನು ರಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಮೊದಲ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ತಂಡವು ಏಕಕಾಲಕ್ಕೆ ಎರಡು ದಿನಗಳ ಪ್ರವಾಸ ಮಾಡಿ ಎರಡು ಮೂರು ದಿನದೊಳಗೆ ವರದಿ ನೀಡಲಿದೆ ಎಂದರು.ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಈಗಿನ ಅಧ್ಯಕ್ಷರು, ಕಾರ್ಯಕರ್ತರು, ಸಂಸದರು, ಶಾಸಕರು, ಮಾಜಿ ಶಾಸಕರು, ಹಿರಿಯರ ಅಭಿಪ್ರಾಯ ಪಡೆದ ಬಳಿಕವೇ ಸಮಗ್ರವಾಗಿ ವರದಿ ನೀಡಲಿದೆ. ಬಳಿಕ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದರು.ಪಕ್ಷದ ಇತ್ತೀಚಿನ ಎಲ್ಲ ಬೆಳವಣಿಗೆ ಕುರಿತು ಗಂಭೀರ ಚರ್ಚೆ ನಡೆದಿದೆ. ರಾಜ್ಯದಲ್ಲಿ ಪಕ್ಷದ ಘನತೆಗೆ ಚ್ಯುತಿ ಬರುವಂಥ ಚಟುವಟಿಕೆ, ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಈ ಬಗ್ಗೆ ಕೇಂದ್ರದ ನಾಯಕರು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದರು.2024ರ ಲೋಕಸಭಾ ಚುನಾವಣೆವರೆಗೆ ಯಾವೊಬ್ಬ ಪದಾಧಿಕಾರಿಗಳು ವಿಶ್ರಾಂತಿ ಪಡೆಯದೆ ಕೆಲಸ ಮಾಡಬೇಕು. ಲೋಕಸಭಾ ಚುನಾವಣೆ ಗೆಲುವಿನೊಂದಿಗೆ ಮನೆಗೆ ವಾಪಸ್ ಬರುವಂತೆ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲಿಯವರೆಗೆ ನಿರಂತರ ಪ್ರವಾಸ ಮಾಡಿ ಪಕ್ಷ ಸಂಘಟಿಸಲು ಸೂಚಿಸಿದ್ದಾರೆ ಎಂದರು.ಪದಾಧಿಕಾರಿಗಳು ಹಿರಿಯರು, ಬೂತ್ ಕಾರ್ಯಕರ್ತರು, ವರಿಷ್ಠರನ್ನು ಸಮಾನವಾಗಿ ನೋಡುವ ಮನಸ್ಥಿತಿ ಹೊಂದಿರಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ತಿಳಿಸಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ ಮತ್ತು ನಮೋ ಆ್ಯಪ್‌ನಲ್ಲಿ ಪ್ರತಿಯೊಬ್ಬ ಪದಾಧಿಕಾರಿಗೆ ನಿಗದಿತ ಟಾಸ್ಟ್ ಕೊಡಲಾಗಿದೆ. ತಳಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕುರಿತು ಮಾಹಿತಿ ಕೊಡಲಾಗಿದೆ ಎಂದರು.
ಕೇಂದ್ರದ ಯೋಜನೆ ತಲುಪಿಸಿಕೇಂದ್ರ ಸರಕಾರದ ಎಲ್ಲ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸಬೇಕು. ಎಲ್ಲ ಪದಾಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅವರ ಜೊತೆ ಚರ್ಚಿಸಬೇಕು. ಕೇಂದ್ರ ಸರಕಾರದ ಯೋಜನೆಗಳಿಂದ ವಂಚಿತರಾದವರನ್ನು ಯೋಜನೆಯ ವ್ಯಾಪ್ತಿಗೆ ತರುವ ಕಡೆ ಆದ್ಯ ಗಮನ ಹರಿಸಲು ಸೂಚಿಸಿದ್ದಾರೆ ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − seven =
Remember me
