ಬೆಂಗಳೂರು:ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನಕ್ಕೆ ವಿರುದ್ಧವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ರಾಜ್ಯ ಬಿಜೆಪಿ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?
ಸರಣಿ ಟ್ಟೀಟ್​ ಮಾಡಿರುವ ಸಿದ್ದರಾಮಯ್ಯ ಅವರು, ಸಂಸದ ಅನಂತ್​ ಕುಮಾರ್ ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್​ಎಸ್ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು-ತಾಖತ್ ಇಲ್ಲ ಅಷ್ಟೆ ಎಂದು ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ ನಡೆಯಲಿ:ಪ್ರಧಾನಿ ಮೋದಿ ಅವರೂ ಸೇರಿದಂತೆ ಬಿಜೆಪಿ ಹೈಕಮಾಂಡ್​ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು, ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ ಎಂದು ಆಗ್ರಹಿಸಿದರು.
ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ. ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಗಲೂ ಬಿಜೆಪಿ ಹೈಕಮಾಂಡ್​ ಹೆಗಡೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾಕೆಂದರೆ ಹೆಗಡೆ ಮಾತುಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನದ ಮಾತುಗಳೂ ಆಗಿತ್ತು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ:ಸಂಸದ ಅನಂತ ಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಕೇಂದ್ರ ಬಿಜೆಪಿ ನಾಯಕರು ಪಕ್ಷದ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ. ಹೆಗಡೆ ಹೇಳಿರುವುದನ್ನೇ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಠ ಕಲಿಸುವ ಕಾಲ ಸನ್ನಿಹಿತ:ಕಾರವಾರ ಕ್ಷೇತ್ರದಲ್ಲಿ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು ಮತ್ತು ದಲಿತರು ಬಹುಸಂಖ್ಯೆಯಲ್ಲಿದ್ದಾರೆ. ಮೀಸಲಾತಿಯ ರದ್ದುಗೊಳಿಸುವ ದುರುದ್ದೇಶದಿಂದಲೇ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನದ ಬದಲಾವಣೆಯ ಬಗ್ಗೆ ವಕಾಲತು ಮಾಡುತ್ತಿದ್ದಾರೆ ಎಂಬ ಅರಿವು ಅವರಲ್ಲಿ ಮೂಡಬೇಕಾಗಿದೆ. ಹೆಗಡೆಯವರಿಗೆ ಮಾತ್ರವಲ್ಲ ಇಂತಹ ಮನುಷ್ಯ ವಿರೋಧಿ ನಡೆಯನ್ನು ಬೆಂಬಲಿಸುತ್ತಿರುವ ಬಿಜೆಪಿ ಕೇಂದ್ರ ನಾಯಕರು ಪಕ್ಷಕ್ಕೂ ಸರಿಯಾದ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.
ಸಂವಿಧಾನದ ಬದಲಾವಣೆಯ ಬಗ್ಗೆ ವಕಾಲತು ಮಾಡುತ್ತಿದ್ದಾರೆ:ಕಾರವಾರ ಕ್ಷೇತ್ರದಲ್ಲಿ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು ಮತ್ತು ದಲಿತರು ಬಹುಸಂಖ್ಯೆಯಲ್ಲಿದ್ದಾರೆ. ಮೀಸಲಾತಿಯ ರದ್ದುಗೊಳಿಸುವ ದುರುದ್ದೇಶದಿಂದಲೇ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನದ ಬದಲಾವಣೆಯ ಬಗ್ಗೆ ವಕಾಲತು ಮಾಡುತ್ತಿದ್ದಾರೆ ಎಂಬ ಅರಿವು ಅವರಲ್ಲಿ ಮೂಡಬೇಕಾಗಿದೆ. ಹೆಗಡೆಯವರಿಗೆ ಮಾತ್ರವಲ್ಲ ಇಂತಹ ಮನುಷ್ಯ ವಿರೋಧಿ ನಡೆಯನ್ನು ಬೆಂಬಲಿಸುತ್ತಿರುವ ಕೇಂದ್ರ ಬಿಜೆಪಿ ಪಕ್ಷಕ್ಕೂ ಸರಿಯಾದ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.
IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
