ಬೆಂಗಳೂರು:ಮುಂಬರುವ ಲೋಕಸಬೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಆಪರೇಷನ್​ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್​ ನಾಯಕರಿಗೆ ಗಾಳ ಹಾಕುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತ ವೇಗ ಪಡೆದುಕೊಂಡಿದ್ದು, ಕಮಲದಳ ನಾಯಕರಿಗೆ ಕಾಂಗ್ರೆಸ್​ ಶಾಕ್​ ನೀಡಿದೆ.
ಮಹತ್ವದ ಬೆಳವಣಿಗೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಜಗದೀಶ್​ ಶೆಟ್ಟರ್, ಶಾಸಕ ಲಕ್ಷ್ಮಣ್​ ಸವದಿ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.
ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದು ಇಂದು ಕಾಂಗ್ರೆಸ್​ ಸೇರ್ಪಡೆಯಾಗುತ್ತಿದ್ದೇನೆ. ಯಾವುದೇ ಷರತ್ತು ಇಲ್ಲದೇ ನಾನು ಇಂದು ಕಾಂಗ್ರೆಸ್​ ಸೇರಿದ್ದೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ.
ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಾಮಪ್ಪ ಲಮಾಣಿ ಹಾಗೂ ಅವರ ಬೆಂಬಲಿಗರು ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ನಂಬಿ ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡರು. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸಿ ಶುಭ ಹಾರೈಸಿದೆ. ಬಿಜೆಪಿ- ಜೆಡಿಎಸ್‌ ಮೈತ್ರಿಯು ಎರಡೂ ಪಕ್ಷದ ನಾಯಕರಲ್ಲಿ ಕಸಿವಿಸಿ ಉಂಟುಮಾಡಿದ್ದು…pic.twitter.com/KOSmALFNGf
ಇದನ್ನೂ ಓದಿ:VIDEO| ಅಹಮದಬಾದಿನಲ್ಲಿ ಪಾಕಿಸ್ತಾನ ತಂಡಕ್ಕೆ ಭವ್ಯ ಸ್ವಾಗತ; ಯೋಧರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ ನೆಟ್ಟಿಗರು
ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ಕರ್ನಾಟಕ ಭಾಗದ ಹಲವು ನಾಯಕರ ಜತೆ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಬೃಹತ್​ ಸಂಖ್ಯೆಯಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಅಲ್ಪ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇಲ್ಲದಿದ್ದರೆ ಬಿಜೆಪಿ 40 ಸ್ಥಾನಗಳನ್ನು ದಾಟುತ್ತಿರಲಿಲ್ಲ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಇರಲಿದ್ದು, ಬಿಜೆಪಿ ಧೂಳಿಪಟವಾಗುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎಚ್​.ಕೆ. ಪಾಟೀಲ್, ಶಾಸಕರಾದ ಲಕ್ಷ್ಮಣ್​ ಸವದಿ, ವಿನಯ್​ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​ ಹಾಗೂ ಬಿ.ಎನ್. ಚಂದ್ರಪ್ಪ ಉಪಸ್ಥಿತಿರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
