ಹಾವೇರಿ:ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ.
ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು. ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್​ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು.
ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್​ ಕಾಂಗ್ರೆಸ್​ಗೆ ಹೋಗುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್​, ಸಿಎಂ ಸ್ವಕ್ಷೇತ್ರದಲ್ಲಿ ಆಪರೇಷನ್ ಹಸ್ತ ಮಾಡಿದ ಹಾಗೆ ಆಗಿದೆ. ನಾಜಿ ಸಂಸದ ಮಂಜುನಾಥ್ ಕುನ್ನೂರು ಪ್ರಬಲ ಪಂಚಮಸಾಲಿ ಮುಖಂಡರೂ ಹೌದು. ಅವರೊಂದಿಗೆ, ಅವರ ಪುತ್ರ ಚಂದನ ಕುನ್ನೂರು ಕೂಡ ಕಾಂಗ್ರೆಸ್​ ಸೇರುತ್ತಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗೆ ಶಿಗ್ಗಾವಿಯಲ್ಲಿ ಶಾಕ್ ನೀಡಿರುವ ಕಾಂಗ್ರೆಸ್, ಸಿಎಂ ವಿರುದ್ಧ ಪಂಚಮಸಾಲಿ ‌ಅಸ್ತ್ರ ಪಯೋಗ ಮಾಡುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
