
ಬೆಂಗಳೂರು:ರಾಜ್ಯದಾದ್ಯಂತ ಫೆ.9 ರಿಂದ 11 ತನಕ 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.ಯಶವಂತಪುರ ವಿಧಾನಸಭಾ ಕ್ಷೇತ್ರ ಹೆಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ 28 ಸಾವಿರ ಹಳ್ಳಿಗಳು, 19 ಸಾವಿರ ನಗರ ಬೂತ್‌ಗಳಲ್ಲಿ 42 ಸಾವಿರ ಕಾರ್ಯಕರ್ತರು 3 ದಿನ ನಿರಂತರವಾಗಿ ಈ ಅಭಿಯಾನದಲ್ಲಿ ಭಾಗವಹಿಸುವರು ಎಂದರು.ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದರು.ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು. ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ನರೇಂದ್ರ ಮೋದಿ ಅವರ ಕನಸು ನನಸಾಗಲು ಪ್ರಯತ್ನಿಸೋಣ ಎಂದರು.ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲಾಗುವುದು ಎಂದರು.ಗ್ರಾಮ ಚಲೋ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ ಎಂದರು.ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿದೆ. 10ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ತಲುಪುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದುಕೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿಜಯೇಂದ್ರ ಹೇಳಿದರು.ಸಿಎಂ ಮಾಂಸಾಹಾರ ಸೇವಿಸಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿಯೂ ಭಾಗವಹಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದಿರುವುದು ದುರದೃಷ್ಟಕರ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಎಲ್ಲೋ ಒಂದು ಕಡೆ ಮರೆಯುತ್ತಿದ್ದಾರೆ. ಇದು ಮೊದಲ ಬಾರಿ ಏನಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ ಎಂದರು.ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ. ಆದರೂ ಈ ಘಟನೆ ನಡೆದಿರುವುದು ನಿಜವಾಗಿಯೂ ಖಂಡನೀಯ ಎಂದರು.ಒಂದು ಕಡೆ ಭಾಷಣ ಮಾಡಿದ ಮುಖ್ಯಮಂತ್ರಿಗಳು, ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ. ಅಂದರೆ, ಅವರ ನಡೆಗೂ ನುಡಿಗೂ ಅಜಗಜಾಢಂತರ ವ್ಯತ್ಯಾಸವಿದೆ. ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ದೇಶದಲ್ಲಿ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನವರಿಕೆ ಆಗಿದೆ ಎಂದರು.ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದೇವೆ.ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ ಎಂದರು.ರಾಜ್ಯದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದ್ರೆ, ಶರಣು ತಳ್ಳಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬಿಜೆಪಿ ಮುಖಂಡರು ರುದ್ರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 5 =
Remember me
