ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜ್ಯದ ಜನತೆಗೆ ತೈಲ ಬೆಲೆ ಏರಿಕೆಯ ಬರೆ ಎಳೆದಿರುವ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತಾರಕಕ್ಕೇರಿದೆ. ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಗುರುವಾರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೇಸರಿಪಡೆ ನಾಯಕರು ವಿಭಿನ್ನ ಪ್ರತಿಭಟನೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಂಎಲ್​ಸಿಗಳಾದ ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಯಿತು. ಮಲ್ಲೇಶ್ವರದ ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಹೊರಟ ಸೈಕಲ್ ಜಾಥಾವನ್ನು ಮಾರ್ಗ ಮಧ್ಯೆಯೇ ತಡೆದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.

ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ಮಾಡಲಾಗುತ್ತಿದೆ. ರೈತರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗಿದೆ. ರಾಜ್ಯ ಸರ್ಕಾರ ಈ ಭಂಡತನದ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರ ಮತ್ತು ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿರ್ಧಾರ ರಾಜ್ಯದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದರು. ರಸ್ತೆ ತಡೆ ಮಾಡಿದರೆ ಲಾಠಿ ಚಾರ್ಜ್ ಮಾಡುವುದಾಗಿ ಗೃಹ ಸಚಿವರು ಹೇಳಿರುವುದು ಖಂಡನೀಯ. ಇದು ಮೂರ್ಖತನದ ಪರಮಾವಧಿ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿಯಾಗಿದೆ. ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಿದೆ. ಬಡವರ ಮೇಲೆ ಭಾರ ಮತ್ತು ಬರೆ ಹಾಕಿ ಗ್ಯಾರಂಟಿ ಯೋಜನೆಗಳ ಮೂಲಕ ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿದೆ. ಮುದ್ರಾಂಕ ಶುಲ್ಕ, ಹಾಲು, ವಿದ್ಯುಚ್ಛಕ್ತಿ ಬಳಿಕ ಇದೀಗ ತೈಲ ಬೆಲೆ ಏರಿಕೆ ಮಾಡಿದೆ. ರಾಜ್ಯದ ಜನ ಕಾಂಗ್ರೆಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ.
| ಬಸವರಾಜ ಬೊಮ್ಮಾಯಿ ಸಂಸದ (ದಾವಣಗೆರೆಯಲ್ಲಿ)

ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮದ್ಯ, ನೋಂದಣಿ ಶುಲ್ಕ, ಪೆಟ್ರೋಲ್, ಡೀಸೆಲ್ ದರ ಏಕಾಏಕಿ ಹೆಚ್ಚಳ ಮಾಡಿ ಜನಸಾಮಾನ್ಯರ ಬದುಕಿಗೆ ಕೊಳ್ಳಿ ಇಟ್ಟಿದೆ. ರಾಜ್ಯದ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಅವ್ಯವಹಾರ ಮಾದರಿಯಲ್ಲಿಯೇ ಸರ್ಕಾರದ ವಿವಿಧ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿದ್ದು, ನಾಲ್ಕೈದು ಸಚಿವರು ಭ್ರಷ್ಟಾಚಾರ ಪ್ರಕರಣದಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ.
| ಜಗದೀಶ ಶೆಟ್ಟರ್ ಸಂಸದ (ಬೆಳಗಾವಿಯಲ್ಲಿ)
ರೈತರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗಿದೆ. ಸರ್ಕಾರ ಈ ಭಂಡತನದ ನಿರ್ಧಾರ ಕೈಬಿಡಬೇಕು. ಬೆಲೆ ಏರಿಕೆ ನಿರ್ಧಾರದಿಂದ ಸಿಎಂ ಹಿಂದೆ ಸರಿಯುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ.
| ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

ಯಾವುದೇ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಇದೀಗ ವಿದ್ಯುತ್, ನೋಂದಣಿ, ಹಾಲು, ಪೆಟ್ರೋಲ್, ಡೀಸೆಲ್, ಬಸ್, ದಿನಸಿ ಸೇರಿ ಎಲ್ಲದರ ದರ ಹೆಚ್ಚಿಸುವ ಮೂಲಕ ಬೆಲೆ ಏರಿಕೆ ಯುಗ ಆರಂಭಿಸಿದ್ದಾರೆ. ಬೆಲೆ ಏರಿಕೆ ಮಾಡಿ ಉಚಿತ ಯೋಜನೆ ಕೊಡಲು 15 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಏಕೆ ಬೇಕು? ಇಡೀ ಸಚಿವ ಸಂಪುಟ ಅಲಿಬಾಬಾ 40 ಚೋರ್ ಎನ್ನುವಂತಾಗಿದೆ. ದರ ಇಳಿಸುವವರೆಗೆ ನಿರಂತರ ಹೋರಾಟ ನಡೆಯಲಿದೆ.
| ಆರ್.ಅಶೋಕ್ ವಿಧಾನಸಭೆ ಪ್ರತಿಪಕ್ಷ ನಾಯಕ (ಕಲಬುರಗಿಯಲ್ಲಿ)

ಶಿವಮೊಗ್ಗ: ಹಸಗೂಸನ್ನು ತೋಟದಲ್ಲಿ ಎಸೆದು ಹೋದ ತಾಯಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + three =
Remember me
