ಕಾರವಾರ:ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯ ಎಂದರು. ಅಭಿವೃದ್ಧಿಯ ಬದಲು ಕೋಮುವಾದಕ್ಕೆ ಆದ್ಯತೆ ನೀಡುತ್ತಿರುವ ಬಿಜೆಪಿ ಸರ್ವಾಧಿಕಾರಿಯಾಗಿದೆ. ಆ ಪಕ್ಷದ ಒಕ್ಕೂಟ ಸೋಲಿಸಲು ಆಪ್ ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸುತ್ತಿದೆ ಎಂದರು.
ಇದನ್ನೂ ಓದಿ:ಮೋದಿ ಮತ್ತೊಮ್ಮೆ ಪ್ರಧಾನಿ, ಯಾವ ದುಷ್ಟ ಶಕ್ತಿ ತಡೆಯಲಾಗದು ಎಂದ ವಿಜಯೇಂದ್ರ
“ಧರ್ಮದ ಹೆಸರಿನಲ್ಲಿ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಚುನಾವಣಾ ಆಯೋಗದಿಂದ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲು ಕಾಯ್ದೆ ತಂದ ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ. ಉದ್ಯಮಿಗಳು, ಭ್ರಷ್ಟಾಚಾರಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ ಚುನಾವಣೆ ಬಾಂಡ್ ಖರೀದಿಸುವಂತೆ ಒತ್ತಡ ಹೇರಿದೆ. ಹಿಟ್ಲರ್​ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ನೀಡಿದೆ” ಎಂದರು.
“ರೈತರ ಸಾಲಮನ್ನಾ ಮಾಡದೆ, ಬಡ್ಡಿ ರಿಯಾಯಿತಿಯೂ ಕೊಡದ ಸರ್ಕಾರ ಉದ್ಯಮಿಗಳ ಹತ್ತಾರು ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದು ನಾಚಿಕೆಗೇಡು. ಬಿಜೆಪಿ ನಾಯಕರು ವಿಶ್ವಗುರುವಾಗುವ ಮುನ್ನ ವಿಶ್ವ ಮಾನವರಾಗಬೇಕಿದೆ. ರಾಜ್ಯದಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಕೇಳಲಾಗಿತ್ತು. ಅವಕಾಶ ಸಿಕ್ಕಿಲ್ಲ” ಎಂದರು.
ಇದನ್ನೂ ಓದಿ:ಪತಿಯ ನೆನಪಿನಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​; ಅಪ್ಪು ಎಂದೆಂದಿಗೂ ನನ್ನ ಪುಟ್ಟ ತಮ್ಮ ಎಂದ ಶಿವಣ್ಣ
“ಸಂವಿಧಾನ ಬದಲಿಸುವ ಮಾತುಗಳನ್ನಾಡಿದ ಅನಂತಕುಮಾರ ಹೆಗಡೆ ಮೇಲೆ ಬಿಜೆಪಿ ಏಕೆ ಕ್ರಮ ಕೈಗೊಂಡಿಲ್ಲ. ಅಂಬೇಡ್ಕರ್​ ಬರೆದ ಸಂವಿಧಾನದ ಬದಲು ಆರ್.ಎಸ್.ಎಸ್ ಸಂವಿಧಾನ ಜಾರಿಗೆ ತರುವುದು ಆ ಪಕ್ಷದ ಹುನ್ನಾರ” ಎಂದು ಆರೋಪಿಸಿದರು.
“ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುವ ಬಿಜೆಪಿ ವರಿಷ್ಠರು ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಲ್ಲಿನ ಹಲವು ನಾಯಕರ ಮಕ್ಕಳು ಚುನಾವಣೆಗೆ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ. ಕುಟುಂಬಕ್ಕೆ ಸೀಮಿತವಾದ ಜೆಡಿಎಸ್ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಇವೆಲ್ಲ ಮೋದಿ ಗಮನದಲ್ಲಿ ಇಲ್ಲವೆ?” ಎಂದು ಪ್ರಶ್ನಿಸಿದರು.
ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 15 =
Remember me
