ಬೆಂಗಳೂರು:ಕೇಂದ್ರ ಸಚಿವ ಸಂಪುಟ ರಚನೆ ವೇಳೆ ರಾಜ್ಯದ ಐವರು ಸಂಸದರಿಗೆ ಅವಕಾಶ ನೀಡಿದ್ದರೂ ಒಬಿಸಿ, ದಲಿತರನ್ನು ಬಿಜೆಪಿ ಕಡೆಗಣಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಇತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳು ಬೆಂಬಲಿಸಿವೆ. ಅದೇ ಸಮುದಾಯದವರು ಸಂಸದರಾಗಿ ಆಯ್ಕೆಯಾಗಿದ್ದರೂ ಅವಕಾಶ ಕೊಟ್ಟಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ರಾಜಕೀಯ ಅಧಿಕಾರ ಹಂಚಿಕೆ ಸಂದರ್ಭದಲ್ಲಿ ಒಬಿಸಿ, ದಲಿತ ಸಂಸದರಿಗೂ ಸಂಪುಟದಲ್ಲಿ ಅವಕಾಶ ನೀಡಬೇಕಾಗಿತ್ತು, ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ದೂರಿದರು.
ಕೇಂದ್ರ ಸಂಪುಟದಲ್ಲಿ ಸಚಿವರಾಗಿರುವ ರಾಜ್ಯದ ಐದು ಸಂಸದರಿಗೆ ಅಭಿನಂದನೆ ಸಲ್ಲಿಸುವೆ. ಅದೇ ರೀತಿ ಅವರ ಮುಂದಿರುವ ಸವಾಲುಗಳನ್ನು ನೆನಪಿಸಬಯಸುವೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚಿನ ಹೊಣೆಗಾರಿಕೆಯಿದೆ ಎಂದು ಡಾ.ಜಿ.ಪರಮೇಶ್ವರ್ ವಿಶ್ಲೇಷಿಸಿದರು.
ಮೇಕೆದಾಟು ಯೋಜನೆಗೆ ಅನುಮತಿ, ಕೃಷ್ಣಾ ಎರಡನೇ ನ್ಯಾಯಾಧಿಕರಣದ ತೀರ್ಪಿನ ಅಧಿಸೂಚನೆ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಸಮ್ಮತಿಗೆ ಕಾದಿವೆ.
ಜತೆಗೆ ಜಿಎಸ್‌ಟಿ ಬಾಕಿ ಮೊತ್ತ ಬಿಡುಗಡೆ ಮಾಡುವುದನ್ನು ನೂತನ ಸಚಿವರು ಆದ್ಯತೆಯ ಮೇಲೆ ತೆಗೆದುಕೊಂಡು ಕ್ರಮವಹಿಸಬೇಕು. ಈ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೇವೆ ಎಂದರು.
ಹೆಚ್ಚುವರಿಯಾಗಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಜನೆ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಯಾರೋ ನಾಲ್ಕು ಜನರು ಹಾಗೆ ಹೇಳಿದ ಮಾತ್ರಕ್ಕೆ ಪಕ್ಷದ ಹೇಳಿಕೆಯಾಗುವುದಿಲ್ಲ.
ವೈಯಕ್ತಿಕವಾಗಿ ಅವರವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರಷ್ಟೇ. ಪಕ್ಷಕ್ಕೂ ಕೆಲವರ ಹೇಳಿಕೆಗಳಿಗೆ ಯಾವುದೇ ಸಂಬಂಧವಿಲ್ಲವೆಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − one =
Remember me
