ಬೆಂಗಳೂರು: ಅಧಿಕಾರಕ್ಕೆ ಬಂದು 9 ವರ್ಷಗಳಾದರೂ ಮೋದಿಯವರು ಒಂದೇ ಒಂದು ಆಶ್ವಾಸನೆ ಈಡೇರಿಸಿಲ್ಲ. ಅದಕ್ಕೆ ಇಂಡಿಯಾವನ್ನು ಭಾರತ ಎಂದು ಬದಲಾಯಿಸಲು ಹೊರಟಿದ್ದಾರೆ. ಬಿಜೆಪಿಗೆ ಕಾರ್ಯಕ್ರಮಗಳನ್ನು ನೀಡಲು ತಾಕತ್ತಿಲ್ಲ ಅದಕ್ಕೆ ಹೆಸರು ಬದಲಾವಣೆ ರಾಜಕೀಯ ಮಾಡುತ್ತಿದ್ದಾರೆ. ಬಹಳ ಶಿಸ್ತು ಇರುವ ಪಕ್ಷ ಎಂದು ಹೇಳುತ್ತಾರೆ ಆದರೆ ಅಶಿಸ್ತಿನಿಂದ ಬಿಜೆಪಿ ಮೂಲೆ ಸೇರುತ್ತಿದೆ, ಸೇರುತ್ತದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವ್ಯಂಗ್ಯವಾಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆಯಾಗಲಿ ಅಥವಾ ಸಮಾಜದ ಯಾವುದೇ ವರ್ಗದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ. ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ಸೋಲುವುದು ಖಚಿತ, ಬಿಜೆಪಿ ಕರ್ನಾಟಕದಲ್ಲಿ ಒಡೆದ ಮನೆ, ಚುನಾವಣೆ ನಡೆದು 3 ತಿಂಗಳಾದರೂ ವಿರೋಧ ಪಕ್ಷದ, ವಿಧಾನಪರಿಷತ್ ನಾಯಕನಿಲ್ಲ, ವಿಪ್‌ಗಳನ್ನು ಆಯ್ಕೆ ಮಾಡಿಲ್ಲ. ಇದೆಲ್ಲಾ ನೋಡಿದರೆ ಬಿಜೆಪಿಯಲ್ಲಿ ಏನೂ ಸರಿಯಿಲ್ಲ ಎಂಬುದು ಸ್ಪಷ್ಟ ಎಂದು ಹೇಳಿದರು.ಬಸವಣ್ಣ ಶ್ರೇಣಿಕೃತ ವ್ಯವಸ್ಥೆಯ ವಿರುದ್ಧ್ದ ದನಿ ಎತ್ತಿದವರು. ವರ್ಗರಹಿತ, ಜಾತಿ ರಹಿತ ಸಮಾಜದ ನಿರ್ಮಾಣಕ್ಕೆ ಲಿಂಗಾಯತ ಧರ್ಮವನ್ನು ಸ್ಥಾಪಿಸಿದವರು. ಆದರೆ ಇಂದು ಭಾರತೀಯ ಜನತಾ ಪಾರ್ಟಿಯವರು ಲಿಂಗಾಯತ ಹಾಗೂ ದಲಿತರ ಬಗ್ಗೆ ಮಾತನಾಡಲು ಪ್ರಾರಂಭ ಮಾಡಿದ್ದಾರೆ ಎಂದು ಟೀಕಿಸಿದರು.ಕಾಂಗ್ರೆಸ್‌ನಲ್ಲಿ ವೀರಶೈವರಿಗೆ ಸ್ಥಾನಮಾನ ಕೊಟ್ಟಿಲ್ಲ ಎಂದು ಹೇಳುತ್ತಾರೆ. ವಿರೇಂದ್ರ ಪಾಟೀಲರು ನಮ್ಮ ರಾಜ್ಯದ ಗೌರವಾನ್ವಿತ ನಾಯಕರು, ಇಂದಿರಾ ಗಾಂಧಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಸೋತ ನಂತರ ಕಾಂಗ್ರೆಸ್‌ಗೆ ಸೇರಿಸಿಕೊಂಡು, ಕೇಂದ್ರದ ಮಂತ್ರಿ ಮಾಡಲಾಯಿತು. ರಾಜ್ಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ, ಮುಖ್ಯಮಂತ್ರಿಗಳನ್ನಾಗಿ ಮಾಡಿದ್ದು ನಮ್ ಪಕ್ಷ ಎಂದರು.ದೇಶದಲ್ಲಿ ಇರುವ ಪ್ರಮುಖ ದಲಿತ ನಾಯಕರ ಹೆಸರು ಹೇಳುತ್ತಾ ಹೋದರೆ ಅವರೆಲ್ಲಾ ಕಾಂಗ್ರೆಸ್ ಪಕ್ಷದಿಂದ ಬಂದವರು. ರಾಜ್ಯಪಾಲರನ್ನಾಗಿ, ಲೋಕಸಭಾ ಸ್ಪೀಕರ್‌ಗಳನ್ನಾಗಿ ಮಾಡಿ ಕಾಂಗ್ರೆಸ್ ಪಕ್ಷ ದಲಿತರಿಗೆ ಗೌರವ ನೀಡಿದೆ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven − five =
Remember me
