ಬೆಂಗಳೂರುಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿಯು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದರು.
ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂದುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ ಎಂದರು.
ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರುಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ ಎಮದು ಹೇಳಿದರು.
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದುಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದುಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
