ಹುಬ್ಬಳ್ಳಿ:ಬಿಜೆಪಿಗರು ಎಂದಿಗೂ ಜನಾಶೀರ್ವಾದದಿಂದ ಅಧಿಕಾರಕ್ಕೆ ಬಂದವರಲ್ಲ. ಈಗಲೂ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ನಿರಂತರ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಖಡಕ್ ತಿರುಗೇಟು ನೀಡಿದರು.
ಇದನ್ನೂ ಓದಿ:14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು
ಅವರು ನನ್ನ ರಾಜೀನಾಮೆಗೆ ಆಗ್ರಹಿಸಿದ ಕೂಡಲೇ ಕೊಡೋದಿಕ್ಕೆ ಆಗೋದಿಲ್ಲ. ವಿಜಯೇಂದ್ರ ರಾಜೀನಾಮೆ ನೀಡುವಂತೆ ನಾನೂ ಆಗ್ರಹಿಸುತ್ತೇನೆ.  ರಿಸೈನ್​ ಮಾಡ್ತಾರಾ ಅವರು ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಾಸಿಕ್ಯೂಷನ್ ವಿಚಾರವಾಗಿ ನಾಳೆ ವಿಚಾರಣೆ ನಡೆಯಲಿದೆ. ಹೈಕೋರ್ಟ್ ತೀರ್ಮಾನ ಏನೆಂಬುದು ಸ್ಪಷ್ಟವಾಗಲಿದೆ ಎಂದರು.
ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಸಂಸದರು ಸೇರಿಕೊಂಡು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಲಿದ್ದೇವೆ. ಈ ವೇಳೆ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ ನಿರಾಣಿ ಹಾಗೂ ಜನಾರ್ಧನ ರೆಡ್ಡಿ ಮೇಲಿರುವ ಪ್ರಾಸಿಕ್ಯೂಷನ್ ತನಿಖೆಗೆ ಆಗ್ರಹಿಸಲಾಗುವುದು. ಈ ಎಲ್ಲ ಪ್ರಕರಣಗಳಲ್ಲೂ ದೋಶಾರೋಪಣ ಪಟ್ಟಿ ಸಲ್ಲಿಕೆಯಾಗಿ ತನಿಖೆಯೂ ಪೂರ್ಣಗೊಂಡಿದೆ. ನಮ್ಮ ಪ್ರಕರಣದಲ್ಲಿ ಯಾವುದೇ ವಿಚಾರಣೆ ಆಗಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿದ್ದಾರೆ ಎಂಬುದು ಸ್ಪಷ್ಟ ಎಂದರು.
14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು

ಐಪಿಎಲ್ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಉಳಿಸಿಕೊಳ್ಳಲ್ಲ RCB! ಅದಕ್ಕೆ ಈ ಮೂರು ಅಂಶಗಳೇ ಕಾರಣ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 + 20 =
Remember me
