ಬೆಂಗಳೂರು:ಇಂದು ನವದೆಹಲಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿ ಮಾಡಿ ಎನ್​ಡಿಎ ಜೊತೆ ಜೆಡಿಎಸ್​ ಮೈತ್ರಿ ನಿರ್ಧಾರವನ್ನು ಘೋಷಿಸಿದ್ದಾರೆ. ಇದರ ಬೆನ್ನಿಗೇ ಇತ್ತ ಕಾಂಗ್ರೆಸ್ ಈ ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದೆ.
ಜೆಡಿಎಸ್ ಇಂದು ಅಧಿಕೃತವಾಗಿ ಎನ್​ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ ಜೆಡಿಎಸ್​ ಪಕ್ಷವು ತನ್ನ ಹೆಸರಿನ ಮುಂದಿರುವ ಸೆಕ್ಯೂಲರ್ ಪದ ಕೈಬಿಡುವುದು ಒಳ್ಳೆಯದು. ಜೆಡಿಎಸ್​ ಬದಲು ಕೇವಲ ಜೆಡಿ ಎಂದು ಇರಿಸಿಕೊಳ್ಳಬಹುದು ಎಂದು ಕಾಂಗ್ರೆಸ್​ ಹೇಳಿದೆ.
ಇದನ್ನೂ ಓದಿ:ಇದು ಕರ್ನಾಟಕದ ಜನರ ಒಳಿತಿಗಾಗಿ ಕೈಗೊಂಡ ನಿರ್ಧಾರ: ಬಿಜೆಪಿ-ಜೆಡಿಎಸ್​ ಮೈತ್ರಿ ಬಳಿಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಜೆಡಿಎಸ್​ ತನ್ನ ಹೆಸರನ್ನು ಜೆಡಿ ಅಥವಾ ಕೆಡಿ (KD) ಎಂದು ಕೂಡ ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ, KD ಅಂದರೆ “ಕಮಲ ದಳ” ಎಂದು ವ್ಯಾಖ್ಯಾನ ಮಾಡಿರುವ ಕಾಂಗ್ರೆಸ್, ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನೇ ವಿಸರ್ಜಿಸಿದ್ದಾರೆ, ಅಭಿನಂದನೆಗಳು ಎಂದೂ ವ್ಯಂಗ್ಯವಾಡಿದೆ.
ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + one =
Remember me
