ಬೆಂಗಳೂರು:ಜೆಡಿಎಸ್-ಬಿಜೆಪಿ ಮೈತ್ರಿ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.ಭೇಟಿ ಬಳಿಕ ಮಾಧ್ಯಮದವರೊಂದಿನಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಎನ್‌ಡಿಎ ಮೈತ್ರಿ ಮೈತ್ರಿ ಕೂಟದ ಜತೆ ಕೈಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಜಂಟಿಯಾಗಿ ಚುನಾವಣೆ ಎದುರಿಸಬೇಕಿದೆ. ಜನತೆಯ ಹಿತದೃಷ್ಟಿ ಕಾಪಾಡುವ ನಿಟ್ಟಿನಲ್ಲಿ ದೇವೇಗೌಡರು ಬಿಜೆಪಿ ಜತೆ ಮೈತ್ರಿಗೆ ತೀರ್ಮಾನ ಮಾಡಿದ್ದಾರೆ. ಯವಕನಾಗಿ, ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ಯಡಿಯೂರಪ್ಪ ಅವರ ಆಶೀರ್ವಾದ ಪಡೆದುಕೊಳ್ಳುವುದು ನನ್ನ ಜವಾಬ್ದಾರಿ. ಅದಕ್ಕಾಗಿ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು.ಬಿಜೆಪಿಯಲ್ಲಿ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಕರ್ತವ್ಯ. ಸೀಟು ಹಂಚಿಕೆ ವಿಚಾರ ಮುಂದಿನ ದಿನಗಳಲ್ಲಿ ಹಿರಿಯರು ಸೇರಿ ಚರ್ಚೆ ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ. ನನ್ನದೇ ಆದ ಜವಾಬ್ದಾರಿ ಇದೆ. ಪ್ರಾದೇಶಿಕ ಪಕ್ಷ ಬೇಳೆಸಬೇಕು ಎಂದು ದೇವೇಗೌಡರು, ಕುಮಾರಸ್ವಾಮಿ ಹಲವು ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಪಕ್ಷ ಜೆಡಿಎಸ್. ನಮ್ಮಂತ ಯುವಕರು ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.ಬಿಜೆಪಿ, ಜೆಡಿಎಸ್ ಸೇರಿ 28 ಲೋಕಸಭಾ ಕ್ಷೇತ್ರ ಗೆಲ್ಲುವುದು ಗುರಿ. ಜನರ ವಿಶ್ವಾಸ ಗಳಿಸಿ 28 ಕ್ಷೇತ್ರ ಗೆಲ್ಲುತ್ತೇವೆ ಎಂದರು.ಮೈತ್ರಿ ಮಾತುಕತೆ ಸಂದರ್ಭದಲ್ಲಿ ಎಚ್.ಡಿ.ರೇವಣ್ಣ ಕುಟುಂಬದವರು ಯಾರು ಇಲ್ಲದೆ ಇರುವ ಕುರಿತ ಪ್ರಶ್ನೆಗೆ, ಈ ವಿಚಾರಕ್ಕೆ ಯಾರೂ ಗೊಂದಲ ಮಾಡಿಕೊಳ್ಳುವುದು ಬೇಡ. ರೇವಣ್ಣ ಅವರು ದೆಹಲಿಯಲ್ಲಿ ಇದ್ದರು. ಹೊಳೆನರಸೀಪುರದಲ್ಲಿ ಕಾರ್ಯಕ್ರಮ ಇತ್ತು. ಅದಕ್ಕೆ ಮೈತ್ರಿ ಸಂದರ್ಭದಲ್ಲಿ ಭಾಗಿಯಾಗಲು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಡ್ಯ ಚುನಾವಣೆಯ ಬಗ್ಗೆ ಮಾತನಾಡಲು ಇದು ಸರಿಯಾದ ಸಮಯವಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೆ ನೋಡೋಣ ಎಂದು ಹೇಳಿದರು.
ನಿಖಿಲ್ ಕುಮಾರಸ್ವಾಮಿ ಭೇಟಿಯಲ್ಲಿ ವಿಶೇಷತೆ ಏನಿಲ್ಲ. ಸೌಹಾರ್ದಯುತ ಭೇಟಿ ಮಾಡಿದ್ದರು. ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಎಂದು ಹೇಳಿದ್ದಾರೆ. ಸದ್ಯದಲ್ಲೇ ಹೋಗುತ್ತೇನೆ. ಕುಮಾರಸ್ವಾಮಿ ಅವರ ಮನೆಗೆ ಹೋಗಿ ಮಾತನಾಡಿಸಿಕೊಂಡು ಬರುತ್ತೇನೆ. ಹೇಗೂ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ.-ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ.
ಬಿಜೆಪಿ, ಜೆಡಿಎಸ್ ಮೈತ್ರಿ ಒಳ್ಳೆಯ ಬೆಳವಣಿಗೆ. ಚುನಾವಣಾ ಮುನ್ನ ಈ ಬೆಳೆವಣಿಗೆ ಆಗಿದ್ದರೆ 135 ಸ್ಥಾನದಲ್ಲಿ ನಾವು ಗೆಲ್ಲುತ್ತಿದ್ದೆವು. ಈಗ ಅದಕ್ಕೆ ಸೂಕ್ತ ಸಮಯ ಬಂದಿದೆ. 28 ಕ್ಷೇತ್ರ ಗೆಲ್ಲುವ ದೃಷ್ಟಿಯಿಂದ ಪಕ್ಷದ ವರಿಷ್ಠರು, ದೇವೆಗೌಡರು ಮತ್ತು ಕುಮಾರಸ್ವಾಮಿ ಜತೆ ಚರ್ಚೆ ಮಾಡಿ ಒಟ್ಟಾಗಿ ಹೋಗುವ ನಿರ್ಧಾರ ಮಾಡಿದ್ದಾರೆ.ಮೈತ್ರಿ ಶಾಶ್ವತವಾಗಿರಲಿದೆ-ಮುನಿರತ್ನ, ಶಾಸಕ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 9 =
Remember me
