ಬೆಂಗಳೂರು:ಜೆಡಿಎಸ್ ಮತ್ತು ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಠರಾವು ಮಾಡಿ ಕಳಿಸುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೆಗೌಡ ತಿಳಿಸಿದರು.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವುದೇ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಗುರಿ ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾವು ಜಂಟಿಯಾಗಿ ಹೋರಾಟ ಮಾಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾರು, ಕ್ಷೇತ್ರಗಳು ಯಾವ್ಯಾವುವು ಎಂಬ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜತೆಯಲ್ಲೆ ಹೋಗೋಣ ಎಂಬ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಮೈಸೂರು ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯಬೇಕೆಂದು ತೀರ್ಮಾನ ಆಗಿಲ್ಲ. ಈ ಕ್ಷೇತ್ರದಿಂದ ಯಾರೇ ಜೆಡಿಎಸ್, ಬಿಜೆಪಿ ಅಭ್ಯರ್ಥಿಯಾದರೂ ನೂರಕ್ಕೆ ನೂರರಷ್ಟು ಗೆಲ್ಲುವುದು ಸತ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸೇರಿದಂತೆ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾದರೂ ನಾವು ಹೋರಾಟ ಮಾಡಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸೆ.25ರಂದು ಕೋರ್ ಕಮಿಟಿ ಸದಸ್ಯರು ಸಭೆ ಮಾಡುತ್ತೇವೆ. ಶಾಸಕರೂ ಕೂಡ ಪಾಲ್ಗೊಳ್ಳುತ್ತಾರೆ. ಪಕ್ಷದ ಪುನರ್ ಸಂಘಟನೆಗಾಗಿ ಸಭೆ ಮಾಡುತ್ತಿದ್ದೇವೆ. ಜೇವರ್ಗಿಯಲ್ಲಿ ಎರಡನೇ ಭಾರಿ ಗೆದ್ದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.27ರಂದು ಹೊಸಪೇಟೆಯಲ್ಲಿ ಸಭೆ ನಡೆಸಲಿದ್ದು ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ 5 ಗ್ಯಾರಂಟಿಗಳ ಜಪ ಮಾಡುತ್ತ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದರು.ರೈತರು ಸಂಕಷ್ಟದಲ್ಲಿದ್ದಾರೆ. ಬರ ತಾಂಡವವಾಡುತ್ತಿದೆ. ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಕಾವೇರಿ ನೀರು ತಮಿಳುನಾಡಿಗೆ ಹರಿಸುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯುಸೆಕ್ ನೀರು ಬಿಟ್ಟರೆ ತಮಿಳುನಾಡಿಗೆ 7 ಟಿಎಂಸಿ ಹರಿದು ಹೋಗುತ್ತದೆ. ಈಗಿರುವ 16 ಟಿಎಂಸಿಯಲ್ಲಿ 9 ಟಿಎಂಸಿ ಮಾತ್ರ ಉಳಿಯುತ್ತದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ತುಂಗಾಭದ್ರ ಜಲಾಶಯದಲ್ಲಿರುವಂತೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೂ ಸಂಕಷ್ಟ ಸೂತ್ರವನ್ನು ಜಾರಿಗೆ ತನ್ನಿ ಎಂದು ಆಗ್ರಹಿಸಿದರು.ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − fifteen =
Remember me
