ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಮಾತುಕತೆ ನಡೆಸಲು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದರುಅವರ ಜತೆ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ತೆರಳಿದರು.
ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.ಸದ್ಯ ಜೆಡಿಎಸ್ ನಾಲ್ಕು ಕ್ಷೇತ್ರಗಳ (ಮಂಡ್ಯ, ಹಾಸನ, ಕೋಲಾರ, ತುಮಕೂರು) ಬೇಡಿಕೆ ಮುಂದಿಟ್ಟಿದೆ. ತುಮಕೂರು ಲೋಕಸಭಾ ಕ್ಷೇತ್ರದ ವಿಚಾರ ಇನ್ನೂ ಅಂತಿಮವಾಗಿಲ್ಲ. ಇಂದಿನ ಚರ್ಚೆ ವೇಳೆ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಆಗುವ ಸಾಧ್ಯತೆ ಇದೆ. ಶುಕ್ರವಾರ ಅಥವಾ ಶನಿವಾರ ಉಭಯ ಪಕ್ಷಗಳಿಂದ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.
ದೆಹಲಿಗೆ ತೆರಳುವ ಮುನ್ನ ಮಾಧ್ಯಮದ ಜತೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಶುಕ್ರವಾರ ಮಾತನಾಡುತ್ತೇನೆ. ಎಷ್ಟು ಸೀಟ್ ಎಂಬುದನ್ನು ನಾವು ಚರ್ಚಿಸಿಲ್ಲ, ಬಿಜೆಪಿಯೂ ಚಿಂತನೆ ಮಾಡಿಲ್ಲ. 28 ಕ್ಷೇತ್ರದ ಇಂದಿನ ಪರಿಸ್ಥಿತಿ ಅವಲೋಕಿಸಿ ಚರ್ಚೆ ಮಾಡುತ್ತೇವೆ. ಮೈತ್ರಿ ವಿಚಾರವಾಗಿ ಸಂಜೆ ಅಮಿತ್ ಶಾ, ಜೆಪಿ ನಡ್ಡಾ ಜತೆ ಚರ್ಚೆ ಮಾಡುವೆ. ಅವಶ್ಯಕತೆ ಬಿದ್ದರೆ ಪ್ರಧಾನಿ ಮೋದಿ, ದೇವೇಗೌಡರು ಚರ್ಚಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − six =
Remember me
