ರಾಯಚೂರು:ರಾಜ್ಯದಲ್ಲಿ ಬಿಜೆಪಿ ಮೂರುವರ್ಷ ಪೂರೈಸಲಿ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಕೆಲಸ ಮಾಡಲು ವಿರೋಧವಿಲ್ಲ ಎಂದು ರಾಯಚೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಬಿಜೆಪಿ ಬಂದ ಮೇಲೆ ಭಷ್ಟಾಚಾರ ಹೆಚ್ಚಾಗಿದೆ ಅಂತ ಬಿಜೆಪಿಯವರೇ ಹೇಳಿದ್ದಾರೆ. ಇದನ್ನು ನಾನು ಹೇಳಿಲ್ಲ. ಮುಚ್ಚುಮರೆ ಇಲ್ಲದೆ ಬಿಜೆಪಿ ಹೇಳಿಕೊಳ್ಳುತ್ತಿದೆ ಅದಕ್ಕೆ ಯಾರು ಕಾರಣ? ಅವರ ಪಕ್ಷದವರೇ ಭ್ರಷ್ಟಚಾರ ಬಗ್ಗೆ ಹೈಕಮಾಂಡಗೆ ದೂರು ಕೊಟ್ಟಿದ್ದಾರೆ ಎಂದು ಹೇಳಿದರು.
ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ ಏನು? ಅನೇಕ ರಾಜ್ಯಗಳಲ್ಲಿ ಈಗಾಗಲೇ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ದೆಹಲಿ ಚುನಾವಣೆಯಲ್ಲಿ ಶೇಕಡವಾರು ಮತದಾನ ಬಿಜೆಪಿಗೆ ಕಡಿಮೆಯಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಮೂರು ಚುನಾವಣೆಯಲ್ಲಿ ಸೋತಿದೆ. ಜನರಿಗೆ ಬದಲಾವಣೆ ಬೇಕಿದೆ. ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಇನ್ನೂ ಕಷ್ಟ ಇದೆ. ತಮಿಳುನಾಡು, ಕೇರಳದಲ್ಲಿ ಕಷ್ಟದಲ್ಲಿರುವ ಬಿಜೆಪಿಗೆ ಪಶ್ಚಿಮಬಂಗಾಳದಲ್ಲಿ ಅಸ್ಥಿತ್ವವೇ ಇಲ್ಲ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
