
ಬೆಂಗಳೂರು:ಬಿಜೆಪಿ ಹೈಕಮಾಂಡ್ ಜೊತೆಯಲ್ಲಿ ಸಮನ್ವಯತೆ ಸಾಧಿಸುವಲ್ಲಿ ವಿಶ್ವಾಸದ ಹೆಜ್ಜೆ ಇಟ್ಟಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕಾರ್ಯಕರ್ತರಲ್ಲೂ ಹೊಸ ವಿಶ್ವಾಸ ತುಂಬಲು ಮುಂದಾಗಿದ್ದಾರೆ.ಲೋಕಸಭೆ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜಕೀಯ ಚಟುವಟಿಕೆ ತೀವ್ರಗೊಳಿಸಿರುವ ಎಚ್ಡಿಕೆ, ತಳಮಟ್ಟದ ಕಾರ್ಯಕರ್ತರ ಪಡೆಯಲ್ಲಿ ಮತ್ತು ಮುಖಂಡರಲ್ಲಿ ರಾಜಕೀಯ ಅನಿವಾರ್ಯತೆ ಹೆಜ್ಜೆಯ ಬಗ್ಗೆ ಮನದಟ್ಟು ಮಾಡಿಕೊಡುತ್ತಿದ್ದಾರೆ.ಪ್ರಾದೇಶಕ ಪಕ್ಷ ಜೆಡಿಎಸ್ ಮುಗಿಸುವ ನಿಟ್ಟಿನಲ್ಲಿಯೇ ಹೆಜ್ಜೆ ಇಟ್ಟ ಸಂದರ್ಭದಲ್ಲಿ ನಮಗೆ ಬಿಜೆಪಿ ಮೈತ್ರಿ ಅನಿವಾರ್ಯವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆಯಲ್ಲಿ ಸ್ಪರ್ಧೆ ಮಾಡಿದರೆ ಮುಂದೆ ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.ಬಿಜೆಪಿಯ ವರಿಷ್ಠ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅತ್ಯಂತ ಹೆಚ್ಚು ವಿಶ್ವಾಸಪೂರ್ವಕವಾಗಿ ನಡೆದುಕೊಂಡಿದ್ದಾರೆ. ಈ ವಿಶ್ವಾಸವನ್ನು ನಾವು ಕಾರ್ಯಕರ್ತರು ಮತ್ತು ಮುಖಂಡರ ಹಂತಕ್ಕೂ ತೆಗೆದುಕೊಂಡು ಹೋಗಲು ರೂಪುರೇಷ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.ಹೈಕಮಾಂಡ್ ಹಂತದಿಂದ ತಳಮಟ್ಟದಲ್ಲಿರುವ ಕಾರ್ಯಕರ್ತರ ತನಕ ಹೊಸ ವಿಶ್ವಾಸವನ್ನು ತುಂಬುವುದೇ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾರ್ಗದರ್ಶನ ಮೇರೆಗೆ ಎಚ್ಡಿಕೆ ಆಗಿಂದಾಗ್ಗೆ ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆಪ್ತ ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
