ಬೆಂಗಳೂರು:ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಅೋಷಿತವಾಗಿ ಜಂಟಿ ಹೋರಾಟ ಈವರೆಗೆ ನಡೆಸಿದ್ದವು. ಸರ್ಕಾರದ ಜತೆಗೆ ಜಂಗಿಕುಸ್ತಿಗೆ ಬಿಜೆಪಿ-ಜೆಡಿಎಸ್ ದೋಸ್ತಿ ಮಾಡಿಕೊಂಡಿದ್ದು, ಉಭಯ ಪಕ್ಷಗಳ ನಾಯಕರು ಜಂಟಿಯಾಗಿ ಈ ವಿಷಯ ಶುಕ್ರವಾರ ಪ್ರಕಟಿಸಿದ್ದಾರೆ.
ವರ್ಗಾವಣೆಯಲ್ಲಿ ಭ್ರಷ್ಟಾಚಾರ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ, ವಿಪಕ್ಷಗಳ ಒಕ್ಕೂಟದ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ವಿರುದ್ಧ ಸದನದೊಳಗೆ ಎರಡೂ ಪಕ್ಷಗಳು ಪರಸ್ಪರ ಧ್ವನಿಗೂಡಿಸಿದ್ದವು.
ವಿಧಾನಸಭೆಯಿಂದ 10 ಬಿಜೆಪಿ ಶಾಸಕರ ಅಮಾನತು ಖಂಡಿಸಿ ವಿಧಾನಸೌಧ ಕೆಂಗಲ್ ಗೇಟ್ ಬಳಿ ಬಿಜೆಪಿ ನಡೆಸಿದ ಹೋರಾಟದಲ್ಲಿ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ರಾಜ್ಯ ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿಯ ಕಲಾಪ ಬಹಿಷ್ಕಾರಕ್ಕೆ ಜೆಡಿಎಸ್ ಬೆಂಬಲಿಸಿದೆ. ಧರಣಿ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸುವ ವೇಳೆ ಜೆಡಿಎಸ್ ನಾಯಕರು ಭಾಗಿಯಾಗಿದ್ದರು.
ಜಂಟಿ ಹೋರಾಟಉಭಯ ಪಕ್ಷಗಳ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಶುಕ್ರವಾರ ಮತ್ತೂ ಒಂದು ಹೆಜ್ಜೆ ಮುಂದಿಟ್ಟರು. ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಡುವ ನಿರ್ಧಾರ ೋಷಿಸಿದರು.
ಮೊದಲ ಹಂತದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನೈಸ್ ಯೋಜನೆ ವಿರುದ್ಧ ಧ್ವನಿ ಎತ್ತಿದ್ದಾರೆ. ಅಕ್ರಮಗಳ ಆಗರವಾಗಿರುವ ನೈಸ್ ಯೋಜನೆಯನ್ನು ಯಾವುದೇ ಮುಲಾಜಿಲ್ಲದೆ, ಸರ್ಕಾರ ವಶಕ್ಕೆ ಪಡೆದು, ಉನ್ನತಮಟ್ಟದ ತನಿಖೆ ನಡೆಸಲು ಒತ್ತಾಯಿಸಿದರು.
ಜಂಟಿ ಸದನ ಸಮಿತಿ ವರದಿ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಒಂದು ವೇಳೆ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಜೆಡಿಎಸ್, ಬಿಜೆಪಿ ಸದನ ಒಳಗೆ- ಹೊರಗೆ ಜಂಟಿ ಹೋರಾಟ ನಡೆಸಲಿವೆ ಎಂದು ಸರ್ಕಾರಕ್ಕೆ ಎಚ್‌ಡಿಕೆ, ಬೊಮ್ಮಾಯಿ ಎಚ್ಚರಿಸಿದರು.
ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆಗೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಕಂಪನಿ ವಿರುದ್ಧ ಹೋರಡುತ್ತೇವೆ. ಸದನ ಸಮಿತಿ ವರದಿ ಇಟ್ಟುಕೊಂಡು ಸರ್ಕಾರ ಸುಮ್ಮನಿದ್ದರೆ ಯಾರಿಗೆ ಲಾಭ ? ಈ ಯೋಜನೆ ನಿಲ್ಲಿಸಿದರೆ 30 ಸಾವಿರ ಕೋಟಿ ರೂ. ಲಭಿಸಲಿದ್ದು, ಆ ಹಣವನ್ನು ಭಾಗ್ಯಗಳಿಗೆ ಬಳಸಿ ಎಂದು ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.
ನೈಸ್ ಯೋಜನೆಯಲ್ಲಿ ಅಕ್ರಮದ ಬಗ್ಗೆ ನಮ್ಮ ಕಾಲದಲ್ಲಿ ಅನೇಕ ಕ್ರಮಗಳಾಗಿವೆ. ಈ ನಿಟ್ಟಿನಲ್ಲಿ ಜೆಡಿಎಸ್-ಬಿಜೆಪಿ ಒಂದಾಗಿ ಹೋರಾಡಲು ನಿರ್ಧರಿಸಿವೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಅನೇಕ ತಿರುವುಗಳನ್ನು ಪಡೆಯಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವೇನೆಂಬುದು ಸ್ಪಷ್ಟಪಡಿಸಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
