ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಸೋಲಿನ ಭಯದಿಂದ ರಾಜ್ಯ-ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ್ ಕಾರಜೋಳ!
ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ರೀತಿಯ ಸಬ್ ಕಾ ಸಾಥ್? ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು, ಬಂತೇ? ಗ್ಯಾಸ್, ಗೊಬ್ಬರದ ಬೆಲೆ ಏರಿಸಿದರು. ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ:ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಜನಸಾಮಾನ್ಯರ ಬದುಕಿಗೆ ಅನುಕೂಲವಾಗುವಂತೆ ಏನೂ ಮಾಡಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ ಎಂದಿದ್ದರು ಆಗಿದೆಯೇ? ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದವರಿಗೆ ಇಂದಿನವರೆಗೆ ಮಾಡಲಾಗಿಲ್ಲ. ನರೇಂದ್ರ ಮೋದಿ ಅವರು ನುಡಿದಂತೆ ನಡೆದಿಲ್ಲ ಇಷ್ಟೆಲ್ಲಾ ಅನ್ಯಾಯ ಮಾಡಿದ ಬಿಜೆಪಿಗೆ ಯಾಕೆ ಮತ ಹಾಕಬೇಕು ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ:ನಾವು ಹಣ ಕೇಳುತ್ತಿರುವುದು ಗ್ಯಾರಂಟಿಗಳಿಗೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಹೇಳುತ್ತಾರೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ. ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೊಡಬೇಡಿ. ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದರು.
ಮಲತಾಯಿ ಧೋರಣೆ ತೋರುತ್ತಿದ್ದಾರೆ :2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೊಡುತ್ತೇವೆ ಎಂದಿದ್ದರು. ಒಂದೇ ಒಂದು ಪೈಸೆ ಬಂದಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಹಣ ಕೊಟ್ಟಿದ್ದೇವೆ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ. 18,171 ಕೋಟಿ ರೂ.ಗಳ ಬರಪರಿಹಾರವನ್ನು ಕೊಡಲು ಮನವಿ ಮಾಡಿ 5 ತಿಂಗಳಾಗಿದ್ದರೂ ಒಂದು ರೂಪಾಯಿ ನೀಡಿಲ್ಲ. ರೈತರು ಕಷ್ಟದಲ್ಲಿದ್ದರೂ ಈವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇದು ಸತ್ಯ. ಬಿಜೆಪಿ ಕರ್ನಾಟಕದ ಜನರನ್ನು ಅತ್ಯಂತ ಅಲಕ್ಷ್ಯದಿಂದ ಕಾಣುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಹೇಳಿದರು.
ಸರ್ವೊಚ್ಛ ನ್ಯಾಯಾಲಯಕ್ಕೆ ಹೋಗಿದ್ದೇವೆ:15ನೇ ಹಣಕಾಸಿನ ಆಯೋಗವು ನಮಗೆ 5,495 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಿತ್ತು, ಇದೂ ಸೇರಿ ಕೆರೆಗಳ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆಗೆ ಬರಬೇಕಿದ್ದ ಒಟ್ಟು 11,495 ಕೋಟಿ ರೂ.ಗಳ ಪೈಕಿ ಒಂದು ರೂಪಾಯಿ ನೀಡದೆ ಹಣಕಾಸು ಸಚಿವರು ಸುಳ್ಳು ಹೇಳುತ್ತಿದ್ದಾರೆ. ಅವರ ತಾಳಕ್ಕೆ ಕುಣಿಯುವ ರಾಜ್ಯ ಬಿಜೆಪಿ ಅವರದ್ದು 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಾಗಿದೆ. ಅದಕ್ಕಾಗಿಯೇ ನಾವು ಸರ್ವೊಚ್ಛ ನ್ಯಾಯಾಲಯಕ್ಕೆ ಹೋಗಿದ್ದೇವೆ. ಬರ ಸಮೀಕ್ಷೆ ವರದಿ ನೀಡಿ ಒಂದು ತಿಂಗಳೊಳಗೆ ಪರಿಹಾರ ಕೊಡಬೇಕೆಂದು ಕಾನೂನಿನಲ್ಲಿದೆ, ಆದರೂ ನಮಗೆ ಪರಿಹಾರ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಬಿಜೆಪಿಗೆ ಮತ ಹಾಕಬೇಕೆ ಎಂದು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ. ತುಟಿ ಬಿಚ್ಚದಬಿಜೆಪಿ ಸಂಸದರದ್ದು ಬರೀ ಪ್ರಲಾಪ. ಮಕ್ಕಳ ಆಸ್ಪತ್ರೆ, ಮೈಸೂರು ಜಿಲ್ಲಾ ಆಸ್ಪತ್ರೆ, ಮೈಸೂರು- ಬೆಂಗಳೂರು ಕಾರಿಡಾರ್, ಕಾಲೇಜು, ಹಾಸ್ಟೆಲ್‍, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಿಸಿದ್ದು ನಾವು. ಮೈಸೂರಿಗೆ ಬಿಜೆಪಿಯವರು ಏನೂ ಮಾಡಿಲ್ಲ ಎಂದು ಟೀಕಿಸಿದರು.
ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ಐವರು ಶಾಸಕರಿಂದ ರಾಜೀನಾಮೆ: ನೋ ಕಮೆಂಟ್​ ಎಂದ ಕೆಎಚ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
