
ಬೆಂಗಳೂರು:ನಾವು ನಡೆಸಿದ ಜನಾಂದೋಲನ ಯಾತ್ರೆಗೆ 1.50 ಲಕ್ಷ ಜನರು ಸೇರಿದ್ದರು. ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಮೈಸೂರಿನಲ್ಲಿ ಸಭೆ ನಡೆಸಿದರೂ 30 ಸಾವಿರ ಜನ ಕೂಡ ಸೇರಲಿಲ್ಲವೇಕೆ? ಜನ ನಮ್ಮ ಪರವಾಗಿ ಇರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದ್ದಾರೆ.
ಬಾಕಿ ಕೇಸ್‌ಗೆ ಅನುಮತಿ ಏಕಿಲ್ಲ?ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಅವರು ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ , ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ.ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ಅವರಿಬ್ಬರು ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ.ಶಶಿಕಲಾ ಜೊಲ್ಲೆ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡದ ರಾಜ್ಯಪಾಲರು ನನ್ನ ಮೇಲೆ ಅಬ್ರಹಾಂ ಎನ್ನುವವರು 26-7-2024 ರ ಬೆಳಗ್ಗೆ 11:30 ಗೆ ದೂರು ನೀಡಿದರೆ ಅದೇ ದಿನರಾತ್ರಿ 10 ಗಂಟೆಗೇ ಶೋ ಕಾಸ್ ನೋಟಿಸ್ ಕೊಟ್ಟಿದ್ದರು ಎಂದು ದಾಖಲೆಗಳ ಸಹಿತ ವಿವರಿಸಿದರು.
ನಮ್ಮ ವಿರುದ್ದ ಷಡ್ಯಂತ್ರಬಿಜೆಪಿ-ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ. ನನ್ನ ಮತ್ತು ಸರ್ಕಾರದ ವಿರುದ್ದ ದೊಡ್ಡ ಷಡ್ಯಂತ್ರ ನಡೆಯುತ್ತಿರುವುದು ನಮಗೆ ಗೊತ್ತಿತ್ತು. ಅದಕ್ಕೆ ನಾವೂ ಹೋರಾಟದ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಸಿಎಂ ಧನ್ಯವಾದನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಸಚಿವ ಸಂಪುಟ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
