ಹಾಸನ:ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿದ್ದ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಪ್ರಿನ್ಸಿಪಲ್‌ ಸಿ.ಜೆ‌, ಜೆಎಂಎಫ್‌ಸಿ ಜಡ್ಜ್​ ಸಿದ್ದರಾಮ.ಎಸ್‌ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:IPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನ ಆಯ್ಕೆ, ಅಕ್ಷರ್ ಪಟೇಲ್‌ಗೆ ಹೊಸ ಜವಾಬ್ದಾರಿ
ದೇವರಾಜೇಗೌಡ ಅವರನ್ನು ನಿನ್ನೆ ಚಿತ್ರದುರ್ಗದ ಹಿರಿಯೂರು ಬಳಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು.
ಈ ವೇಳೆ ಲೈಂಗಿಕ ದೌರ್ಜನ್ಯದ ಕೇಸ್‌ನಲ್ಲಿ ಅವರನ್ನು ಪೊಲೀಸರು ಬಂಧಿಸಿ, ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರೋ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದು, ಬಳಿಕ ಎಸ್‌ಐ ಅರುಣ್ ನೇತೃತ್ವದಲ್ಲಿ ಹಾಸನ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದರು.
ಅರಕಲಗೂಡು, ಹಳ್ಳಿಮೈಸೂರು ಹಾಗೂ ಬಾಣಾವರ ಪಿಎಸ್‌ಐಗಳು ದೇವರಾಜೇಗೌಡರನ್ನು ಕರೆತಂದು ಹೊಳೆನರಸೀಪುರದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಇರಿಸಿದ್ದರು. ಸತತ ವಿಚಾರಣೆಯ ಬಳಿಕ ಪೊಲೀಸ್ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆ ಕರೆದೊಯ್ದಿದ್ದಾರೆ. ತದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಮಾಜಿ ಸಿಎಂ ಎಸ್.​ಎಂ ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − one =
Remember me
