ಶಿವಮೊಗ್ಗ:ಸೊರಬ ಕ್ಷೇತ್ರದಿಂದ ಸಹೋದರನ ವಿರುದ್ಧವೇ ಸೋಲುಂಡಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಕಾಂಗ್ರೆಸ್​ ಪಾಳಯಕ್ಕೆ ಜಿಗಿಯಲು ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಅದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದಿಂದ ಕುಮಾರ್​ ಬಂಗಾರಪ್ಪ ಕಣಕ್ಕಿಳಿದಿದ್ದರು. ಅವರ ಪ್ರತಿಸ್ಪರ್ಧಿಯಾಗಿ ಅವರ ಸ್ವಂತ ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೇ 13ರಂದು ಪ್ರಕಟವಾದ ಫಲಿತಾಂಶದಲ್ಲಿ ಕುಮಾರ್​ ಬಂಗಾರಪ್ಪ ಅವರು ಸಹೋದರನ ವಿರುದ್ಧವೇ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ.
ಇದನ್ನೂ ಓದಿ:ಮೆಗಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಮ್​ಚರಣ್​ ಪತ್ನಿ ಉಪಾಸನಾ
ಇದೀಗ ಬಿಜೆಪಿ ಬಿಟ್ಟು ಆಡಳಿತಾರೂಢ ಕಾಂಗ್ರೆಸ್​ ಕಡೆ ಮುಖ ಮಾಡಿದ್ದಾರೆನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕುಮಾರ್​ ಬಂಗಾರಪ್ಪ ಅವರು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಇತ್ತ ಕಾಂಗ್ರೆಸ್​ ಸಹ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಈ ಸಂದರ್ಭದಲ್ಲಿ ಕುಮಾರ್​ ಬಂಗಾರಪ್ಪ ಹೆಸರು ಮುನ್ನೆಲೆಗೆ ಬಂದಿದೆ.
ಬಿಜೆಪಿಯಲ್ಲಿದ್ದರೆ ಉತ್ತಮ ಸ್ಥಾನಮಾನ ಸಿಗುವುದು ಅನುಮಾನ ಎಂದು ಭಾವಿಸಿ, ಕಾಂಗ್ರೆಸ್​ನತ್ತ ಕುಮಾರ್​ ಬಂಗಾರಪ್ಪ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಅವರು ಕಾಂಗ್ರೆಸ್ ಸೇರ್ಪಡೆಗೊಂಡರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಇದನ್ನೂ ಓದಿ:ಸರ್ಕಾರದ ಅನುದಾನ ಅನಾದರ, ಸಿಟ್ಟಿಗೆದ್ದ ಕಲಾವಿದರು: ನಿಯಮ ಬದಿಗೊತ್ತಿ ಅಧಿಕಾರಿಗಳ ಅಡ್ಜೆಸ್ಟ್​ಮೆಂಟ್ ಎಂದು ಆರೋಪ; ಬೀದಿಗಿಳಿದು ದನಿ ಎತ್ತಲು ಸಜ್ಜು
ಕುಮಾರ್‌ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಉಹಾಪೋಹಗಳಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಕುಮಾರ್‌ ಬಂಗಾರಪ್ಪ ಭೇಟಿ ಮಾಡಿರುವ ಫೋಟೋಗಳು ಪುಷ್ಠಿ ನೀಡಿವೆ. ತಿಮ್ಮಪ್ಪ ಅವರೊಂದಿಗೆ ಕುಮಾರ್​ ಬಂಗಾರಪ್ಪ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.(ದಿಗ್ವಿಜಯ ನ್ಯೂಸ್​)
ಗಾಸಿಪ್​ಗೊಂದು ಫುಲ್​ಸ್ಟಾಪ್!; ಗಾಸಿಪ್ ಮಾಡಲು ಕಾರಣ?

ಸುಕ್ಕು ಕೂದಲಿಗೆ ಶಾಶ್ವತ ಪರಿಹಾರ ಹೇರ್ ಸ್ಟ್ರೈಟ್​ನಿಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + thirteen =
Remember me
