ಬೆಂಗಳೂರು:ಅಸಮರ್ಥ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಪಾಪರ್ ಸರ್ಕಾರವನ್ನು ಉಳಿಸಿಕೊಳ್ಳಲು 25,000 ಎಕರೆ ಸಾರ್ವಜನಿಕ ಆಸ್ತಿಯನ್ನು ಬಳಸಿಕೊಳ್ಳಲು ಹೊರಟಿದ್ದೀರಲ್ಲ, ಮುಂದೊಂದು ದಿನ ತಾವು ವಿಧಾನಸೌಧವನ್ನೇ ಅಡ ಇಟ್ಟರೂ, ಹರಾಜು ಹಾಕಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ದರ್ಶನ್​ ಫೋಟೋ ಹಿಡಿದು ಕಿಲೋ ಮೀಟರ್​ಗಟ್ಟಲೆ ಪಾದಯಾತ್ರೆ..ದೇವರ ಮೊರೆ ಹೋದ್ರು ಡಿ ಬಾಸ್​ ಫ್ಯಾನ್ಸ್!​
“15 ಜಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ತಮಗೆ ರಾಜ್ಯದ ಬಜೆಟ್ ಮಂಡಿಸುವಾಗ ಸರ್ಕಾರದ ಆದಾಯ, ವೆಚ್ಚದ ಬಗ್ಗೆ ಜ್ಞಾನವಿರಲಿಲ್ಲವೇ? ಬಜೆಟ್ ಮಂಡಿಸಿದ ನಾಲ್ಕೇ ತಿಂಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದ್ದಾಯ್ತು, ಈಗ 25,000 ಎಕರೆ ಸಾರ್ವಜನಿಕ ಆಸ್ತಿಯನ್ನು ಸಂಪನ್ಮೂಲ ಕ್ರೂಢೀಕರಣಕ್ಕೆ ಬಳಸಿಕೊಳ್ಳಲು ಹೊರಟಿದ್ದೀರಲ್ಲ, ಇದೇನಾ ಬಜೆಟ್ ರಚನೆ ಬಗ್ಗೆ ತಮಗಿರುವ ಪಾಂಡಿತ್ಯ? ಇದೇನಾ ತಾವು ಜಂಭ ಕೊಚ್ಚಿಕೊಳ್ಳುವ ಬುದ್ಧಿವಂತಿಕೆ?” ಎಂದು ಕಿಡಿಕಾರಿದ್ದಾರೆ.
“ಕರ್ನಾಟಕದಂತಹ ಪ್ರಗತಿಶೀಲ ರಾಜ್ಯವನ್ನು ಇಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದೀರಲ್ಲ, ತಮಗೆ ನಿಜಕ್ಕೂ ನಾಚಿಕೆಯಾಗಬೇಕು. ದೇವೇಗೌಡರಿಂದ ಹಿಡಿದು ಈಗ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರವರೆಗೆ ಅನೇಕರ ಕೃಪೆಯಿಂದ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಹತ್ತಾರು ವರ್ಷ ಅಧಿಕಾರ ಅನುಭವಿಸಿದ್ದೀರಲ್ಲ, ಕರ್ನಾಟಕಕ್ಕೆ, ಕನ್ನಡಿಗರಿಗೆ ತಮ್ಮ ಕೊಡುಗೆ ಏನು ಹೇಳಿ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಹೆಂಡತಿಗಾಗಿ ದೇಶವನ್ನೇ ಬದಲಿಸಿ, ನಗೆಪಾಟಲಿಗೀಡಾದವ ಇಂದು ಹೀರೋ..ಇದು ಆಂಡರ್ಸನ್ ಕಥೆ
“ಪ್ರತ್ಯೇಕ ಧರ್ಮ, ಭಾಷೆ, ಜಾತಿ, ಉತ್ತರ-ದಕ್ಷಿಣ, ಕೇಂದ್ರ-ರಾಜ್ಯ, ಅಲ್ಪಸಂಖ್ಯಾತರ ಓಲೈಕೆ ಅಂತ ಜನರನ್ನ ದಿಕ್ಕು ತಪ್ಪಿಸಿ, ಜೀವನದುದ್ದಕ್ಕೂ ಯಾರಿಗೋ ಸಿಕ್ಕ ಜನಾದೇಶವನ್ನು ಕಸಿದುಕೊಂಡು ಅಧಿಕಾರ ಅನುಭವಿಸಿದ್ದೊಂದೇ ನಿಮ್ಮ ಸಾಧನೆ. ಕರ್ನಾಟಕಕ್ಕೆ ತಮ್ಮ ಕೊಡುಗೆ ಏನಪ್ಪಾ ಅಂದರೆ ಶೂನ್ಯ, ದೊಡ್ಡ ಶೂನ್ಯ” ಎಂದು ಲೇವಡಿ ಮಾಡಿದ್ದಾರೆ.
ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
