ಮೈಸೂರು:ನನ್ನ ಪತ್ನಿಗೆ ಬದಲಿ ನಿವೇಶನ ನೀಡಿದ್ದು ವಿವಾದದ ವಿಚಾರವೇ ಅಲ್ಲಾ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಈ ವಿಚಾರವನ್ನು ಎಳೆದಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮುಡಾ ಹಗರಣದ ಕುರಿತು ಮೈಸೂರು ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮುಡಾದಿಂದ ಶೇ 50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ. ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣಕ್ಕೋಸ್ಕರ ಪ್ರತಿಭಟಿಸುತ್ತಿದ್ದಾರೆ.
ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪಿಎ ಅರೆಸ್ಟ್​
ಭೂಮಿ ಕಳೆದುಕೊಂಡವರ ಪ್ರಕರಣವೇ ಬೇರೆ. ನಮ್ಮ ಜಮೀನನ್ನು ಕಾನೂನಿಗೆ ವಿರುದ್ಧವಾಗಿ ಪಡೆದುಕೊಂಡ ಪ್ರಕರಣವಿದು. ನಮ್ಮ ಜಮೀನಿಗೆ ಪರಿಹಾರ ಕೊಡಿ ಎಂದು ಪತ್ನಿ ಕೇಳಿದ್ದರು. ವಿಜಯನಗರದಲ್ಲೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಿರುವುದು ತಪ್ಪು ಎಂದು ಪ್ರಾಧಿಕಾರವೇ ಒಪ್ಪಿ ನಿವೇಶನ ನೀಡಿದೆ. ಹೀಗಿರುವಾಗ ಇದರಲ್ಲಿ ವಿವಾದವೇನಿದೆ, ಅಕ್ರಮವೇನಿದೆ. ನಿಮ್ಮ ಜಮೀನನ್ನು ಹೀಗೆ ಪಡೆದುಕೊಂಡರೆ ಬಿಟ್ಟು ಬಿಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಮುಡಾದಲ್ಲಿ ನಡೆದಿರುವ ಅಕ್ರಮದ ಕುರಿತು ಇಬ್ಬರು ಐಎಎಸ್‌ ಅಧಿಕಾರಿಗಳ ತಂಡದಿಂದ ತನಿಖೆ ಮಾಡಿಸುತ್ತಿದ್ದೇವೆ. ನಿವೇಶನಗಳು ಹಂಚಿಕೆ ಆಗಿರುವುದನ್ನು ಅಮಾನತಿನಲ್ಲಿಟ್ಟಿದ್ದೇವೆ. ಕಾನೂನು ಬಾಹಿರ ಎಂದು ವರದಿ ಬಂದರೆ, ಸಂಬಂಧಿಸಿದವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮವರೇ ಸಮರ್ಥರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
