ಬೆಂಗಳೂರು: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್, ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಪೂರ್ಣಿಮಾ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಹಲವು ನಾಯಕರನ್ನು ಸಂಪರ್ಕಿಸಿ ಆಪರೇಷನ್ ಹಸ್ತಕ್ಕೆ ಮುನ್ನುಡಿ ಬರೆದಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮ್ಮ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರು ಕೋ-ಆಪರೇಷನ್ ಎಂದು ಹೇಳಿದರು.ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ದಾಂತ, ಭಾರತ್ ಜೋಡೊ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ ಎಂದರು.ಹಾಲಿ- ಮಾಜಿಗಳನ್ನು ಯಾವಾಗ ತಬ್ಬಿಕೊಳ್ಳುವಿರಿ ಎಂಬ ಮಾಧ್ಯಮ ಪ್ರತಿನಿಧಿಗಳ ಮರುಪ್ರಶ್ನೆಗೆ ಉತ್ತರಿಸುತ್ತಾ ಎಷ್ಟು ಜನ ಸೇರಲಿದ್ದಾರೆ ಎನ್ನುವ ಪಟ್ಟಿ ಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆ ಮುಹೂರ್ತ, ಲಗ್ನ ಕೂಡಿಬಂದಾಗ ನಡೆಯಲಿದೆ ಎಂದು ತಿಳಿಸಿದರು.ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ ನಾವು ಯಾರನ್ನು ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಲ್ಲಾ ವಾಷಿಂಗ್ ಮೆಷಿನ್ ಸೇರಿಕೊಂಡು ಬಿಡಲಿಲ್ಲವೇ ಎಂದು ತಿಳಿಸಿದರು.ಕಳೆದ ಹದಿನೈದು ದಿನಗಳಿಂದೀಚೆಗೆ ಡಿ.ಕೆ.ಶಿವಕುಮಾರ್ ಬಿಜೆಪಿ ಮುಖಂಡರ ಸಂಪರ್ಕ ಹೆಚ್ಚು ಮಾಡಿದ್ದು, ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಬಹುತೇಕ ಭೇಟಿ ಲಪ್ರದವಾದಂತೆ ಕಾಣಿಸಿದ್ದು ಮುಂದಿನ ದಿನಗಳಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯುವುದು.ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಡೆದ ಮತ ಗಳಿಕೆಗೂ ಕಾಂಗ್ರೆಸ್ ಮತಗಳಿಕೆಗೂ ಹೆಚ್ಚು ವ್ಯತ್ಯಾಸವಿಲ್ಲ. ಲೋಕಸಭೆ ಚುನಾವಣೆಯಲ್ಲಿ ಮತ ಗಳಿಕೆ ಹೆಚ್ಚಿಸಿಕೊಳ್ಳಲೇ ಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಗುರಿ ನೀಡಿದ್ದು, ಆ ಪ್ರಕಾರ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಕಡಗಣನೆಗೊಳಗಾದವರನ್ನು ಪಟ್ಟಿ ಮಾಡಿಕೊಂಡು ಅವರನ್ನು ಮಾತನಾಡಿಸುವ ಕೆಲಸವನ್ನು ಡಿ.ಕೆ.ಶಿವಕುಮಾರ್ ಮುಂದುವರಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + 16 =
Remember me
