ಹುಬ್ಬಳ್ಳಿ:ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜನ ಗುಂಪು ಸೇರದಂತೆ, ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ಸರ್ಕಾರ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೆ, ಈ ನಿಯಮವನ್ನು ಆರೋಗ್ಯ ಸಚಿವರ ಆಪ್ತನೊಬ್ಬ ಉಲ್ಲಂಘಿಸಿದ್ದು, ಗುಂಡು-ತುಂಡಿನ ಭರ್ಜರಿ ಪಾರ್ಟಿ ಮಾಡಿದ್ದಾರೆ.
ಬಿಜೆಪಿ ಸ್ಥಳೀಯ ಮುಖಂಡ ಎಚ್​.ಎಸ್​. ಶಿವನಗೌಡ ಶುಕ್ರವಾರ ರಾತ್ರಿ ಗುಂಡು-ತುಂಡಿನ ಪಾರ್ಟಿ ಆಯೋಜಿಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಬಿ.ಶ್ರೀರಾಮುಲು ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶಿವನಗೌಡ, ಗದಗ ತಾಲೂಕಿನ ಶ್ರೀನಿವಾಸ ಗಾರ್ಡನ್​ನಲ್ಲಿ ಪಾರ್ಟಿ ಆಯೋಜಿಸಿದ್ದರು ಎನ್ನಲಾಗಿದೆ.ಇದನ್ನೂ ಓದಿರಿಮಂಗಳವಾರ ರಾತ್ರಿಯಿಂದಲೇ ಲಾಕ್​ಡೌನ್​ ಜಾರಿ
ಶಿವನಗೌಡರ ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡ ಜನರು ಮಾಸ್ಕ್​ ಧರಿಸದೆ, ಪರಸ್ಪರ ಅಂತರವನ್ನೂ ಪಾಲಿಸದೆ ”ಎಣ್ಣೆ” ನಶೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಸಾಮಾಜಿಕ ಅಂತರ ಮರೆತು ಪಾರ್ಟಿಯಲ್ಲಿ ಇನ್ನೂರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಕರೊನಾ ಸಂಕಷ್ಟ ಸಂದರ್ಭದಲ್ಲಿ ಪಾರ್ಟಿ ಬೇಕಿತ್ತಾ? ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.
‘ಕಾರ್ಯಕ್ರಮ ಆಯೋಜಿಸಿದ್ದು ನಾನಲ್ಲ, ಸ್ನೇಹಿತರು ಏರ್ಪಡಿಸಿದ್ದರು. ಅಲ್ಲಿಗೆ ನಾನು ಹೋಗಿದ್ದೆ. ಜು.4 ನನ್ನ ಜನ್ಮದಿನ’ ಎಂದು ಶಿವನಗೌಡ ಸ್ಪಷ್ಟನೆ ನೀಡಿದ್ದಾರೆ.
https://www.facebook.com/VVani4U/videos/3010413149056158/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
