ವಿಜಯಪುರ:ನಗರದ ಸಾಯಿ ವಿಹಾರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಬ್ಲೌಸ್​ ಪೀಸ್​ಗಾಗಿ ತಳ್ಳಾಟ ನಡೆದಿದೆ. ಸಮಾವೇಶದ ಕಾರಣದಿಂದ ಕೇಸರಿ ಬಣ್ಣ ಸೇರಿದಂತೆ ವಿವಿಧ ಬಣ್ಣಗಳ ಬ್ಲೌಸ್ ಪೀಸ್ ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ತಾ ಮುಂದು… ನಾ ಮುಂದು… ಎಂದು ಮಹಿಳೆಯರ ನಡುವೆ ನೂಕಾಟ ನಡೆದಿದೆ.
ಕೇಂದ್ರ ಸಚಿವೆ, ಹಿಂದೂ ನಾಯಕಿ ಸಾಧ್ವಿ ನಿರಂಜನ ಜ್ಯೋತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದಲ್ಲಿ ಮಹಿಳಾ ಸಮಾವೇಶ ನಡೆದಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಾಧ್ವಿ ನಿರಂಜನ ಜ್ಯೋತಿ ಮಾತನಾಡುತ್ತಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎರಡು ಸಾವಿರ ನಿಡೋದಾಗಿ ಹೇಳಿದ್ದಾರೆ. ನಿಮ್ಮದೇ ಸರ್ಕಾರ ಅಧಿಕಾರದಲ್ಲಿರುವ ಬೇರೆ ರಾಜ್ಯದಲ್ಲಿ ಯಾಕೆ ಈ ಯೋಜನೆ ಜಾರಿಗೆ ತಂದಿಲ್ಲ. ರಾಹುಲ್ ಗಾಂಧಿ ದೇಶ ಜೋಡೋ ಯಾತ್ರೆ ಮಾಡ್ತಾರೆ. ಆದರೆ ದೇಶ ಒಡೆದಿರುವುದು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಅವಧಿಯಲ್ಲಿ ಆಗದ ಕೆಲಸಗಳನ್ನು ಮೋದಿ ಎಂಟು ವರ್ಷದಲ್ಲಿ ಮಾಡಿದ್ದಾರೆ. ಮೋದಿ ಅವರ ಆಡಳಿತ ನೋಡಿ ಕಾಂಗ್ರೆಸ್ ನಾಯಕರು ಕಲಿಯಬೇಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರೈಲ್ವೇ ನಿಲ್ದಾಣದಲ್ಲಿ ಶವ ಪತ್ತೆ ಪ್ರಕರಣ | ಮೂವರ ಬಂಧನ; ಪೊಲೀಸರಿಗೆ ಹಂತಕರ ಸುಳಿವು ನೀಡಿದ್ದು ಡ್ರಮ್ ಮೇಲಿದ್ದ ಸ್ಟಿಕ್ಕರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
