
ಬೆಂಗಳೂರು:ರಾಜ್ಯದ 8 ಕ್ಲಸ್ಟರ್‌ಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಸಂಸದರು, ಶಾಸಕರು, ಮಾಜಿ ಶಾಸಕರುಗಳು ಹಾಗೂ ಜಿಲ್ಲಾ ಮುಖಂಡರ ಅಭಿಪ್ರಾಯಗಳನ್ನು ಆಲಿಸುವ ಸಭೆ ಯಶಸ್ವಿಯಾಗಿ ಮುಗಿದಿದೆ ಎಂದುಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಆದರೆ, ಈಗ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ಬದಲಾಗಿದೆ. ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಎಲ್ಲಾ ನಾಯಕರ ಜೊತೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಮುಂದಿನ ಚುನಾವಣೆಯ ದೃಷ್ಟಿಯಿಂದ ದೇಶದಲ್ಲಿ ಬಿಜೆಪಿ ಪರವಾದ ವಾತವರಣ ಇದೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಹೆಚ್ಚಾಗಿದೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ವಾತಾವರಣ ಇದೆ. ರಾಜ್ಯದಲ್ಲಿ ಇದಕ್ಕೆ ಪೂರಕವಾಗದ ವಾತಾವರಣ ನಿರ್ಮಾಣ ಆಗಿದೆ ಎಂದರು.ಕಾರ್ಯಕರ್ತರು ಕೂಡ ಸೋಲಿನ ಹತಾಶೆಯಿಂದ ಹೊರಗೆ ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟ ಮಾಡಲು ಹಾಗೂ ಅಭ್ಯರ್ಥಿ ಗೆಲ್ಲಿಸುವ ಉತ್ಸಾಹ ಕಾರ್ಯಕರ್ತರಲ್ಲಿದೆ. ನಿನ್ನೆಯಿಂದ ನಮ್ಮ ನಾಯಕರು ಅನೇಕ ಸಲಹೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಗಳಲ್ಲಿ ಕಾರ್ಯ ಯೋಜನೆ ಮಾಡಲಾಗುವುದು ಎಂದರು.ಆದಷ್ಟು ಬೇಗ ಅಭ್ಯರ್ಥಿಗಳ ಘೋಷಣೆ ಮಾಡಬೇಕು ಎಂದು ಹಿರಿಯರು ಮತ್ತು ಪ್ರಮುಖರು ಲಹೆ ನೀಡಿದ್ದಾರೆ. ತಡ ಮಾಡದೇ ಅಭ್ಯರ್ಥಿಗಳ ಘೋಷಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ. ನಾನು ಆದಷ್ಟು ಬೇಗ ವರಿಷ್ಠರನ್ನು ಭೇಟಿ ಮಾಡಿ ಅಭ್ಯರ್ಥಿ ತೀರ್ಮಾನ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಸುಮಲತಾ ಜೊತೆ ಚರ್ಚೆ:ಮಂಡ್ಯ ಟಿಕೆಟ್ ಬಗ್ಗೆ ಗೊಂದಲವೇನಿಲ್ಲ. ಸುಮಲತಾ ಅಂಬರೀಶ್ ಭೇಟಿ ಮಾಡಿ ಚರ್ಚಿಸಿ, ತೀರ್ಮಾನ ಮಾಡ್ತೀವಿ ಎಂದರು.
ಗ್ಯಾರಂಟಿ ಸಮಿತಿ ರಚನೆ ಸರಿಯಲ್ಲ:ಗ್ಯಾರಂಟಿಗಳಿಗಾಗಿ ಸಮಿತಿ ರಚಿಸಿ ಕಾರ್ಯಕರ್ತರನ್ನು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ನೇಮಿಸಲು ಹೊರಟಿರುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದರು.ಸರ್ಕಾರಿ ನೌಕರರಿಗೆ ವೇತನ ಕೊಡಲು ಹಣ ಇಲ್ಲ. ಅಂಗನವಾಡಿ ಕಾರ್ಯಕರ್ತರಯರಿಗೆ ಗೌರವ ವೇತನ ಹೆಚ್ಚಿಸಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ಲ. ಇಂಥ ಸಂದರ್ಭದಲ್ಲಿ ಜನರ ತೆರಿಗೆ ಹಣ ಪೋಲು ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರದ ಹಣ ಜನರ ಹಣ. ನಿಮ್ಮ ಕಾರ್ಯಕರ್ತರಿಗೆ ಕೊಡಲು ಅಲ್ಲ. ಇದರ ವಿರುದ್ಧ ನಾವು ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರಿಗೂ ಭೇಟಿ ಮಾಡಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nine =
Remember me
