ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆಯ ಬೆನ್ನಿಗೆ ಬಿಜೆಪಿ ಕಾರ್ಯಕರ್ತರ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿದ್ದು, ಆಡಳಿತ ಪಕ್ಷದ ವಿರುದ್ಧ ಭಾರಿ ಅಸಮಾಧಾನ ವ್ಯಕ್ತವಾಗಿದೆ. ಅಲ್ಲದೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಲಾರಂಭಿಸಿದ್ದು, ಅದು ಚಳವಳಿ ರೂಪ ತಳೆದಿದೆ.
ಹೀಗೆ ಕಾರ್ಯಕರ್ತರೇ ತಮ್ಮ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ, ಅಸಹಾಯಕತೆಯ ಜತೆಗೆ ತೀವ್ರ ಬೇಸರವನ್ನೂ ವ್ಯಕ್ತಪಡಿಸಿದ್ದರೆ, ಇತ್ತ ಆಳುವ ಪಕ್ಷದ ಶಾಸಕರೊಬ್ಬರೂ ಪ್ರವೀಣ್ ಹತ್ಯೆಯ ವಿಚಾರವಾಗಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಹೇಳಲು ನಾಚಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರು ತಮ್ಮ ಫೇಸ್​ಬುಕ್ ಪೇಜ್​ನಲ್ಲಿ ಸ್ಟೇಟಸ್ ಮೂಲಕ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. “ನಮ್ಮದೇ ಸರ್ಕಾರ!, ನಮ್ಮದೇ ಕಾರ್ಯಕರ್ತರ ಕೊಲೆ!, ನನಗೆ ಹೇಳಿ ಕೊಳ್ಳಲು ನಾಚಿಕೆಯಾಗುತ್ತಿದೆ! ಕ್ಷಮಿಸಿ ಬಿಡು ಪ್ರವೀಣ್..” ಎಂಬುದಾಗಿ ಅವರು ಪೋಸ್ಟ್ ಮಾಡಿದ್ದಾರೆ.

ನನ್ನ ಪತಿಯ ಆತ್ಮಹತ್ಯೆಗೆ ಈಶ್ವರಪ್ಪನವರೇ ಕಾರಣ ಎಂದು ನಾನೂ ಆತ್ಮಹತ್ಯೆ ಮಾಡಿಕೊಳ್ಳುವೆ: ರೇಣುಕಾ ಪಾಟೀಲ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × four =
Remember me
