ಬೆಂಗಳೂರು:ರಾಜ್ಯ ಕಾಂಗ್ರೆಸ್​ ಸರ್ಕಾರ ಗುತ್ತಿಗೆದಾರರ ಬಿಲ್​ ತಡೆ ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯಕೊಡಿಸಬೇಕು ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಕೆ. ಗೋಪಾಲಯ್ಯ ಆಗ್ರಹಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೋಪಾಲಯ್ಯ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಕಾಂಗ್ರೆಸ್​ನಿಂದ ಕಿಕ್​ಬ್ಯಾಕ್​ ಪಡೆದು ಸುಮ್ಮನಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್​ ಯಾರಿಂದಲೂ ಕಮಿಷನ್​ ಕೇಳಿಲ್ಲ ಎಂದು ಅವರು ನಂಬಿರುವ ಅಜ್ಜಯ್ಯನ ಮೇಲೆ ಆಣೆ ಮಾಡಿ ಹೇಳಲಿ. ತಮ್ಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಗುತ್ತಿಗೆದಾರರು ನಮ್ಮ ನಾಯಕರನ್ನೂ ಭೇಟಿ ಮಾಡಿದ್ದಾರೆ. 300ಕ್ಕೂ ಹೆಚ್ಚು ಗುತ್ತಿಗೆದಾರರು ರಾಷ್ಟ್ರಪತಿಯವರಿಗು ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್​ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಚಾಟಿ ಬೀಸಿದ್ದಾರೆ.
ರಾಜ್ಯ ಸರ್ಕಾರ ಗುತ್ತಿಗೆದಾರರ ಬಾಕಿ ಮೊತ್ತವನ್ನೂ ತಡೆ ಹಿಡಿಯುವ ಮೂಲಕ ಬೆಂಗಳೂರಿಗೆ ಒಂದು, ಬೇರೆಡೆಗೆ ಇನ್ನೊಂದು ನೀತಿ ಅನುಸರಿಸುತ್ತಿದೆ. ಸರ್ಕಾರದ ಧೋರಣೆಯನ್ನು ಖಂಡಿಸಿ ಗುತ್ತಿಗೆದಾರರು ಕೆಲಸವನ್ನೂ ನಿಲ್ಲಿಸಿದರೆ ಲಕ್ಷಾಂತರ ಜನ ನಿರುದ್ಯೋಗಿಗಳಾಗುತ್ತಾರೆ. ಆಗ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ಇದನ್ನೂ ಓದಿ:VIDEO| ಬ್ರಿಟಿಷರ ಕಾಲದ ಮೂರು ಕಾಯ್ದೆ ಬದಲು; ಲೋಕಸಭೆಯಲ್ಲಿ ಮಸೂದೆ ಮಂಡನೆ
ಹಿಂದೆ ನಮ್ಮ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಕಾಂಗ್ರೆಸ್​ನಿಂದ ಕಿಕ್​ಬ್ಯಾಕ್​ ಪಡೆದಿರುವುದು ಸ್ಪಷ್ಟವಾಗಿದೆ. ಗುತ್ತಿಗೆದಾರರ ಕುಟುಂಬದವರು ನೇಣು ಹಾಕಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಬಾಕಿ ಮೊತ್ತವನ್ನೂ ತಕ್ಷಣವೇ ಬಿಡುಗಡೆ ಮಾಡಿ ಅನಾಹುತಗಳಿಗೆ ಅವಕಾಶ ಕೊಡದಿರಿ ಎಂದು ಒತ್ತಾಯಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್​ ಅವರ ತಾಂತ್ರಿಕ ಸಲಹೆಗಾರರಾಗಿ ನೇಮಕಗೊಂಡಿರುವ ಕೆ.ಟಿ. ನಾಗರಾಜ್​ ಅವರ ಹಿನ್ನಲೆ ಏನು. 26 ಷರತ್ತುಗಳನ್ನು ವಿಧಿಸಿ ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿರುವುದನ್ನೂ ನೋಡಿದರೆ ರಾಜ್ಯವನ್ನೂ ಲೂಟಿ ಹೊಡೆಯಲೆಂದೇ ನೇಮಕ ಮಾಡಲಾಗಿದೆ ಎಂದು ಶಾಸಕ, ಮಾಜಿ ಸಚಿವ ಕೆ. ಗೋಪಾಲಯ್ಯ ಆರೋಪಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
