ಬೆಂಗಳೂರು:ರೂಪಾಂತರಿ ಚಿಕನ್ ಗುನ್ಯಾ ಸೋಂಕು ತಗುಲಿದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹಾಗೂ ರಾಜಾಜಿನಗರದ ಶಾಸಕ ಎಸ್​ ಸುರೇಶ್​ ಕುಮಾರ್ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ.
ಇದನ್ನೂ ಓದಿ:ಹಿಮಾಚಲ ಪ್ರದೇಶ | ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಇಲ್ಲ: ವಿಧಾನಸಭೆಯಲ್ಲಿ ಹೊಸ ಮಸೂದೆ ಅಂಗೀಕಾರ!
ರೂಪಾಂತರಿ ಚಿಕನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ತಮ್ಮ ಆರೋಗ್ಯದ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.ನಾನು ಆರೋಗ್ಯವಾಗಿದ್ದೇನೆ. ಚಿಕನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಭಾದಿಸುತ್ತಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಚೇತರಿಕೆ ಕಂಡಿದ್ದು, ಗುಣಮುಖರಾಗಿದ್ದೇನೆ. ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ ಎಂದು ಎಂದಿದ್ದಾರೆ.
ರಾಜ್ಯ ಸರ್ಕಾರದ ಪತನ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ಬಸವರಾಜ ಬೊಮ್ಮಾಯಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
