ಬೆಂಗಳೂರು:ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್​. ಸುರೇಶ್​ ಕುಮಾರ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; 20 ಸರ್ಕಾರಿ ಪ್ರಾಥಮಿಕ, 11 ಪ್ರೌಢಶಾಲಾ, 8 ಪಿಯು, ಇಬ್ಬರು ಪ್ರಾಂಶುಪಾಲರಿಗೆ ಗೌರವ
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರೇಶ್ ಕುಮಾರ್ ಅವರ ಮೆದುಳಿಗೂ ಜ್ವರ ತಗುಲಿರುವ ಕಾರಣ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್‌ಕುಮಾರ್ ಅವರು ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಸುರೇಶ್ ಕುಮಾರ್ ಅವರು ಒಂದು ದಿನ ಭಾಗಿಯಾಗಿದ್ದರು. ಇದಾದ ಬಳಿಕ ಕಳೆದ ತಿಂಗಳಿಂದ ಸುರೇಶ್ ಕುಮಾರ್ ಬಹಳ ಆಯಾಸಗೊಂಡಿದ್ದರು ಎನ್ನಲಾಗಿದೆ.
ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
