ಬೆಂಗಳೂರು:ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಟ್ರಾಪ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ.
ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್​ಗಾಗಿ KSDL ಅಧ್ಯಕ್ಷರ ಪರವಾಗಿ ಹಣ ಸ್ವೀಕರಿಸುವಾಗ ಪ್ರಶಾಂತ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ವರದಿಯ ಪ್ರಕಾರ 81 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 40 ಲಕ್ಷ ರೂಪಾಯಿ ಪಡೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಅವರನ್ನು ಸದ್ಯ ಲೋಕಾಯಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹತ್ತಕ್ಕೂ ಅಧಿಕ ಲೋಕಾಯುಕ್ತ ಪೊಲೀಸರು, ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕರ ಕಚೇರಿಗೆ ದಾಳಿ ಮಾಡಿದ್ದಾರೆ.
ಇದನ್ನೂ ಓದಿ:ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 9 =
Remember me
