
ಬೆಂಗಳೂರು:ಲೋಕಸಭಾ ಚುನಾವಣೆ ಮುಗಿದರೂ ಬಿಜೆಪಿಯಲ್ಲಿನ ಬಣ ರಾಜಕೀಯ ಇನ್ನೂ ಶಮನವಾಗಿಲ್ಲ. ಒಂದಿಲ್ಲ ಒಂದು ಕಾರಣಕ್ಕೆ ಪಕ್ಷದೊಳಗಿನ ಬಣ ರಾಜಕೀಯ ಮುನ್ನೆಲೆಗೆ ಬರುತ್ತಲೇ ಇದೆ.ಮುಂಚೂಣಿಯಲ್ಲಿರುವ ನಾಯಕರು ಕಾರ್ಯಕರ್ತರ ಕೈ ಹಿಡಿಯದೆ, ತಮ್ಮ ಬೆಂಬಲಿಗರಿಗೆ ಮಣೆ ಹಾಕುವ ಮೂಲಕ ಪಕ್ಷದೊಳಗೆ ತಮ್ಮ ಹಿಡಿತ ಗಟ್ಟಿಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.ಬೆಂಗಳೂರಿನಲ್ಲಿಯೂ ಒಕ್ಕಲಿಗ ಕೋಟೆ ಕಟ್ಟಿಕೊಂಡಿರುವ ಕೆಲವೇ ಹಿರಿಯ ನಾಯಕರುಗಳ ಪಡೆ, ಹೊಸ ಮುಖ ಪರಿಚಯಿಸಲು ಅವಕಾಶ ನೀಡುತ್ತಿಲ್ಲ. ಪಕ್ಷಕ್ಕಾಗಿ ದುಡಿಮೆ ಮಾಡಿದ ಹಾಗೂ ಚುನಾವಣೆಗಾಗಿ ಸಿದ್ಧತೆ ಮಾಡಿಕೊಡಿದ್ದ ನಮ್ಮಂತ ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷಿಸಲಾಗಿದೆ ಎಂದು ಹೆಸರು ಹೇಳಿಕೊಳ್ಳಲು ಇಚ್ಛಿಸದ ಪ್ರಮುಖರೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇದೇ ರೀತಿ ನೈರುತ್ಯ ಕ್ಷೇತ್ರದಲ್ಲಿಯೂ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೂ ಬಣ ರಾಜಕೀಯ ಮೇಲಾಟದಿಂದಲೇ ಪಕ್ಷದ ಅಭ್ಯಥಿಗಳ ಗೆಲುವಿಗೆ ಹಿನ್ನೆಡೆ ಆಗಿದ್ದ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹೈಕಮಾಂಡ್ ಎಚ್ಚರಿಕೆ ಹೆಜ್ಜೆ ಇಟ್ಟಿತ್ತು. ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಯಾವುದೇ ಬಣದ ಕೈ ಮೇಲಾಗದಂತೆ ಲಗಾಮು ತನ್ನ ಕೈಯಲ್ಲಿ ಇಟ್ಟುಕೊಂಡೇ ಚುನಾವಣೆಯನ್ನು ನಿರ್ವಹಣೆ ಮಾಡಿತ್ತು.ವಿಧಾನ ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಮತ್ತೆ ಬಣ ರಾಜಕಾರಣ ಸದ್ದು ಮಾಡುತ್ತಿದೆ. ಬೆಂಗಳೂರು ಪದವಿಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದವರಿಗೆ ಪ್ರಮುಖ ನಾಯಕರಿಂದ ಪೂರಕ ಬೆಂಬಲವೂ ಸಿಕ್ಕಿತ್ತು. ಆದರೆ, ಬೆಂಗಳೂರು ಪಧವಿಧರರ ಕ್ಷೇತ್ರದ ಟಿಕೆಟ್ ತೀರ್ಮಾನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಹೈಕಮಾಂಡ್ ಅಸ್ತು ಎಂದಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
