ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕಾಗಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಹಿರಿಯ ಮುಖಂಡರ ಸಭೆ ಉದ್ಘಾಟಿಸಿ ಮಾತನಾಡಿ, ಪಕ್ಷಕ್ಕೆ ಹಿರಿಯರ ಮಾರ್ಗದರ್ಶನವೂ ಮುಖ್ಯ. ಅದಕ್ಕಾಗಿ ಈ ಸಭೆ ನಡೆದಿದೆ ಎಂದರು.ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಬಸವರಾಜ ಬೊಮ್ಮಾಯಿ, ಈಶ್ವರಪ ಸೇರಿ ಅನೇಕರು ಕಾರಣಕರ್ತರಾಗಿದ್ದಾರೆ ಎಂದರು.ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ಗೋಚರಿಸುವುದಿಲ್ಲ. ಬಿಜೆಪಿಗೆ ಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಲಿದ್ದಾರೆ. ಜಿಪಂ, ತಾಪಂ, ಚುನಾವಣೆಯಲ್ಲಿಯೂ ಗೆಲುವು ಸಾಧಿಸಲು ಸಂಘಟಿತ ಯತ್ನ ಮುಖ್ಯವಾಗಿದೆ ಎಂದರು.
ಚುನಾವಣಾ ರಣತಂತ್ರದ ಚರ್ಚೆ: ಸಿ.ಟಿ.ರವಿ*ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ದೇಶದ ಜನರು ಮೋದಿಯವರು ಮತ್ತೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ. ಜೆಡಿಎಸ್ ಜೊತೆ ಸಮನ್ವಯ ಸಾಧಿಸಿ ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬ ವಿಷಯ ಚರ್ಚಿಸಲಾಗಿದೆ. 2 ಪದವೀಧರ, 4 ಶಿಕ್ಷಕರ ಕ್ಷೇತ್ರ ಸೇರಿ ವಿಧಾನಪರಿಷತ್ತಿನ 6 ಕ್ಷೇತ್ರಗಳ ಚುನಾವಣಾ ದೃಷ್ಟಿಯಿಂದಲೂ ಚರ್ಚೆ ನಡೆದಿದೆ. ಬಿಜೆಪಿಯನ್ನು ಮತ್ತೆ ಸಂಘಟಿಸುವುದು, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಗುರಿ.-ಸಿ.ಟಿ.ರವಿ. ಮಾಜಿ ಸಚಿವರು.
ಹೋರಾಟದ ಚರ್ಚೆ: ಈಶ್ವರಪ್ಪ*ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಸಭೆಯು ಚರ್ಚಿಸಿದೆ. ಲೋಕಸಭೆ, ವಿಧಾನಪರಿಷತ್ ಚುನಾವಣೆಯನ್ನು ಕೂಡ ಬಿಜೆಪಿ- ಜೆಡಿಎಸ್ ಎರಡೂ ಸೇರಿ ಗೆಲ್ಲಬೇಕು. ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ನಿರ್ಧರಿಸಲಾಗಿದೆ.-ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವರು.
*ಯತ್ನಾಳ್ ಹೇಳಿಕೆ ನನಗೆ ವೈಯಕ್ತಿಕವಾಗಿ ನೋವುಂಟು ಮಾಡಿದೆ. ಅವರ ಹೇಳಿಕೆ ಬಗ್ಗೆ ಬಹಿರಂಗವಾಗಿ ಮಾತಾಡಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಯತ್ನಾಳ್ ಹೇಳಿಕೆ ಬಗ್ಗೆ ಮಾತಾಡುವೆ. ಅವರು ಹಿರಿಯರು, ಅರ್ಥ ಮಾಡ್ಕೋಬೇಕು. ಪಕ್ಷದ ಒಳಗಿದ್ದೇ ಹೀಗೆಲ್ಲ ಆರೋಪ ಮಾಡೋದು ಸರಿಯಲ್ಲ.-ಆರಗ ಜ್ಞಾನೇಂದ್ರ, ಮಾಜಿ ಸಚಿವರು.
*ಲೋಕಸಭೆ ಚುನಾವಣೆ ಗೆಲ್ಲುವ ದಿಕ್ಕಿನಲ್ಲಿ ಮಾಡಬೇಕಾದ ತಯಾರಿ ಬಗ್ಗೆ ಚರ್ಚಿಸಲಾಗಿದೆ.ಹಿರಿಯರು ತಮ್ಮ ಸಲಹೆಗಳ ಕೊಟ್ಟಿದ್ದಾರೆ. ಮಿತ್ರಪಕ್ಷ ಜೆಡಿಎಸ್ ಜತೆ ಸಮನ್ವಯತೆಯಿಂದ ಪಕ್ಷ ತಯಾರಿಗೆ ನಿರ್ಧರಿಸಲಾಗಿದೆ. ಯತ್ನಾಳ್ ಬಗ್ಗೆ ವರಿಷ್ಠರ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.-ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + eight =
Remember me
